ಸಿದ್ದರಾಮಯ್ಯ ಯಾವುದೇ ಅಸಮಾಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಲು ಒಪ್ಪಿಗೆ
ಬೆಂಗಳೂರು: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜತೆ ಬೆಳಗ್ಗೆ ಉಪಾಹಾರ ಸೇವಿಸಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್ಗೆ ಅಭಿನಂದನೆ ತಿಳಿಸಿದ್ದಾರೆ. ಇಂದು ರಾಜ್ಯಪಾಲರು ಇರುವುದಿಲ್ಲವಂತೆ, ಹೋಗಿ ನೋಡುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ತಾನು ಪ್ರಬಲವಾಗಿದೆ ಎಂಬ ಸಂದೇಶವನ್ನು ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಹಸ್ತಾಂತರದ ಮೂಲಕ ಸ್ಪಷ್ಟಪಡಿಸಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ನಡೆದ ಗೊಂದಲಗಳಿಗೆ ಅವಕಾಶ ನೀಡದೆ, ಸಿದ್ದರಾಮಯ್ಯ ಯಾವುದೇ ಅಸಮಾಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಲು ಒಪ್ಪಿಕೊಂಡಿದ್ದಾರೆ. ಇದು ಹೈಕಮಾಂಡ್‌ಗೆ ನಿರಾಳತೆ ತಂದಿದೆ.
ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ, ರಾಜ್ಯಪಾಲರು ಇಲ್ವಂತಲ್ಲ, ಹೋಗ್ತೀನಿ ನೋಡೋಣ” ಎಂದು ಹೇಳುವ ಮೂಲಕ, ತಮ್ಮ ನಿರ್ಧಾರ ಸ್ಪಷ್ಟವಾಗಿದೆ ಎಂದು ಸೂಚಿಸಿದರು. ಪ್ರಸ್ತುತ, ರಾಜ್ಯಪಾಲರು ವೈಯಕ್ತಿಕ ಕಾರಣಗಳಿಂದ ಇಂದೋರ್‌ನಲ್ಲಿದ್ದು, ಇಂದು ಬೆಂಗಳೂರಿಗೆ ವಾಪಸ್ ಆಗುವ ನಿರೀಕ್ಷೆಯಿದೆ. ಈ ಸುಗಮ ಪರಿವರ್ತನೆಯನ್ನು ಕಾಂಗ್ರೆಸ್‌ಗೆ ಒಳ್ಳೆಯ ಬೆಳವಣಿಗೆ ಎಂದು ಪಕ್ಷದ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.
ಉಪಾಹಾರ ಕೂಟದಲ್ಲಿ ಭಾಗವಹಿಸಲು ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ಮೂಲಕ ಇಬ್ಬರು ನಾಯಕರು ಒಟ್ಟಿಗೆ ಇರುವ ಅಪರೂಪದ ಮತ್ತು ಆತ್ಮೀಯ ಚಿತ್ರಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.
ಉಪಾಹಾರ ಕೂಟ ಆರಂಭವಾಗುವ ಮುನ್ನ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಉಳಿದೆಲ್ಲಾ ಸಚಿವರನ್ನು ಕಾನ್ಫರೆನ್ಸ್ ರೂಮ್‌ನಲ್ಲಿ ಕಾಯುವಂತೆ ಸೂಚಿಸಿ, ಮನೆಯೊಳಗಿನ ಪ್ರತ್ಯೇಕ ಕೊಠಡಿಯೊಂದರಲ್ಲಿ ಕೇವಲ ಇಬ್ಬರೇ ಸುದೀರ್ಘ ಮಾತುಕತೆ ನಡೆಸಿದರು. ಇಬ್ಬರು ನಾಯಕರು ಎಲ್ಲರನ್ನೂ ಹೊರಗೆ ಕಳುಹಿಸಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆಸಿದ ಈ ಒನ್-ಟು-ಒನ್ ಚರ್ಚೆ ತೀವ್ರ ರಾಜಕೀಯ ಕುತೂಹಲ ಮೂಡಿಸಿದೆ.
ಕಾಮೆಂಟ್ ಬಿಡಿ