ತಲೆ ಬುರುಡೆ ಪ್ರಕರಣ: ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ
ಧರ್ಮಸ್ಥಳ, ಮೇ. 22 : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯ ಆರಂಭದಲ್ಲಿ ನ್ಯಾಯಾಲಯಕ್ಕೆ ತಂದಿದ್ದ ತಲೆಬುರುಡೆಯನ್ನು ಬಂಗ್ಲೆಗುಡ್ಡೆಯಲ್ಲಿ ತೆಗೆಯಲಾಗಿದ್ದು ಈ ಮಾನವನ 'ತಲೆ ಬುರುಡೆ' ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ.
ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ 21 ರಂದು ಅಪರಾಹ್ನ 2:40ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಕರೆದುಕೊಂಡು ಬಂದು ಸ್ಥಳ ಪರಿಶೀಲನೆ ನಡೆಸಿ ಮಹಜರು ಕಾರ್ಯ ಆರಂಭಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ವಿಡಿಯೋಗಳ ಮರುಸೃಷ್ಠಿ ಮಾಡಲು, ಎಸ್ಐಟಿ ಅಧಿಕಾರಿಗಳು ಹಾಗೂ ಬೆಂಗಳೂರಿನ ಎಫ್‌ಎಸ್‌ಎಲ್ ತಂಡ ಬಂಟ್ವಾಳದ ಪ್ರದೀಪ್ ಕುಲಾಲ್ ಗೌಡನನ್ನು ಬಂಗ್ಲೆಗುಡ್ಡೆಗೆ ಕರೆತಂದಿದ್ದಾರೆ. ಆರಂಭದಲ್ಲಿ ನಡೆಸಲಾಗಿದ್ದ ಮಹಜರು ಸಮರ್ಪಕವಾಗಿ ನಡೆದಿಲ್ಲ ಎಂಬ ಕಾರಣಕ್ಕೆ ಇದೀಗ ಮತ್ತೆ ಮಹಜರು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಾಮೆಂಟ್ ಬಿಡಿ