ಕ್ರೈಂ

ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಬಲೆಗೆ

ಮಂಗಳೂರು: ಲಂಚದ ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ವಂಚನೆ ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಹಣ ಬಿಡುಗಡೆಗಾಗಿ ಬಾಲಕೃಷ್ಣ 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮೊದಲ ಕಂತಿನಲ್ಲಿ 15 ಸಾವಿರಕ್ಕೆ ಲಂಚ ಪಡೆದಿದ್ದ ಬಾಲಕೃಷ್ಣ ಇಂದು 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ. ಸದ್ಯ ಬಾಲಕೃಷ್ಣರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಾಮೆಂಟ್ ಬಿಡಿ

Join Us