ಸುದೀಪ್ ಶೆಟ್ಟಿ ಪತ್ನಿ ಸೌಮ್ಯ ಶೆಟ್ಟಿ ಹೇಳಿದ್ದೇನು; ಮದುವೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು
ದಕ್ಷಿಣ ಕನ್ನಡ : ಜಿಲ್ಲೆಯ ನೆಲ್ಯಾಡಿ ಮೂಲದ ಸುದೀಪ್ ಶೆಟ್ಟಿ ಹಾಗೂ ಕಾರ್ಕಳ ಬಂಗ್ಲೆಗುಡ್ಡೆ ನಿವಾಸಿ, ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಫೆಬ್ರವರಿ 17 ರಂದು ಪುತ್ತೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ವಿವಾಹವಾಗಿದ್ದರು. ಸುದೀಪ್ ಮನೆಯವರು ಈ ಮದುವೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ತಮ್ಮ ಮೇಲಿನ ಆರೋಪವನ್ನು ಸೌಮ್ಯ ಶೆಟ್ಟಿ ತಿರಸ್ಕರಿಸಿದ್ದಾರೆ. ನಮ್ಮ ಮದುವೆಯನ್ನು ಸುದೀಪ್ ಮನೆಯವರು ಒಪ್ಪಿರಲಿಲ್ಲ. ದೀಪಾವಳಿ ನಂತರ ಮದುವೆ ಮಾಡೋಣ ಎಂದಿದ್ದವರು ನಂತರ ನಿರಾಕರಿಸಿದರು. ಇದರಿಂದ ಸುದೀಪ್ ತೀವ್ರ ಮನನೊಂದಿದ್ದರು. ಅಷ್ಟೇ ಅಲ್ಲದೇ ಸುದೀಪ್ ಅವರಿಗೆ ಲಕ್ಷಾಂತರ ರೂಪಾಯಿ ಸಾಲವಿತ್ತು. ಸಾಲಗಾರರು ಪೋನ್ ಮಾಡಿದಾಗ ಅವರ ತಂದೆಯೇ ನನ್ನ ನಂಬರ್ ನೀಡುತ್ತಿದ್ದರು. ಇದೆಲ್ಲವೂ ಅವರಿಗೆ ಮಾನಸಿಕ ಒತ್ತಡ ತಂದಿತ್ತು. ನೆಲ್ಯಾಡಿಗೆ ಹೋಗಿದ್ದಾಗಲೇ ಅವರು ವಿಷ ಸೇವಿಸಿರಬಹುದು. ಆಸ್ಪತ್ರೆಗೆ ದಾಖಲಿಸಿದಾಗ ಆರಂಭದಲ್ಲಿ ಜಾನ್ಡೀಸ್ ಇರಬಹುದು ಎಂದು ವೈದ್ಯರು ಚಿಕಿತ್ಸೆ ನೀಡಿದ್ದರು. ನಂತರ ಅವರು ವಿಷ ಸೇವಿಸಿರುವುದು ಬೆಳಕಿಗೆ ಬಂತು. ನನಗೆ ಈ ಹಿಂದೆ ಒಂದು ಮದುವೆಯಾಗಿ ವಿಚ್ಛೇದನವಾಗಿರುವುದು ನಿಜ. ಅದನ್ನು ನಾನು ಸುದೀಪ್‌ಗೆ ಮೊದಲೇ ತಿಳಿಸಿದ್ದೆ. ಆದರೆ ನಾನು ನಾಲ್ಕೈದು ಮದುವೆಯಾಗಿದ್ದೇನೆ ಎಂಬ ಆರೋಪ ಸುಳ್ಳು ಎಂದಿದ್ದಾರೆ.
ಕಾರ್ಕಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳೂರಿನ ಯನಪೋಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ನಂತರ ಸುದೀಪ್ ಸಾವಿನ ಹಿಂದಿನ ನಿಖರ ಕಾರಣ ಹಾಗೂ ಸೌಮ್ಯ ಶೆಟ್ಟಿ ಮೇಲಿನ ಆರೋಪಗಳ ಸತ್ಯಾಸತ್ಯತೆ ಹೊರಬರಬೇಕಿದೆ.
ಕಾಮೆಂಟ್ ಬಿಡಿ