‘ಟಾಬ್ಲೆಟ್ ಆರಿಫ್’ ಕೊಲೆ ಪ್ರಕರಣಕ್ಕೆ ಮಹತ್ವದ ಸುಳಿವು ಲಭ್ಯ; ಕಾರು ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಪತ್ತೆ
ಮಂಗಳೂರು: ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳದ ಬುಡೋಳಿಯಲ್ಲಿ ಸಂಶಯಾಸ್ಪದ ಕಾರು ಇರುವ ಬಗ್ಗೆ ಮಾಹಿತಿ ಲಭಿಸಿದೆ.ಕೂಡಲೇ ಕಾರ್ಯಪ್ರವೃತ್ತರಾದ ವಿಟ್ಲ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ಸ್ಥಳಕ್ಕೆ ದೌಡಾಯಿಸಿ, ಕಾರನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ರೌಡಿಶೀಟರ್ ಆರಿಫ್ನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ. ಶುಕ್ರವಾರ ನಸುಕಿನ ಜಾವ ಆರಿಫ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದು, ನಂತರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ಹಿಂದೆಯೂ ಆರಿಫ್ ಮೇಲೆ ಕೊಲೆ ಯತ್ನ ನಡೆದಿತ್ತು. ಹೀಗಾಗಿ ಇದು ಗ್ಯಾಂಗ್‌ವಾರ್‌ನ ಪರಿಣಾಮವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.
ಕಾಮೆಂಟ್ ಬಿಡಿ