ಜಿಲ್ಲಾ ಸುದ್ದಿಗಳು

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ರೋಹಿಣಿ ಸಿಂಧೂರಿ ನೇಮಕ

ಉಡುಪಿ : ಸರಕಾರದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ರೋಹಿಣಿ ಸಿಂಧೂರಿ ರಾಜ್ಯದ ಜನಪ್ರಿಯ ಹಾಗೂ ಅಷ್ಟೇ ವಿವಾದಿತ ಐಎಎಸ್ ಅಧಿಕಾರಿಗಳಲ್ಲಿ ಒಬ್ಬರು. ಆಂಧ್ರ ಮೂಲದ ಇವರು 2009ರ ಕರ್ನಾಟಕ ಕೇಡರ್‌ನ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ. ಹಾಸನ, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ರೋಹಿಣಿ ಸಿಂಧೂರಿ, ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಕಾಮೆಂಟ್ ಬಿಡಿ

Join Us