ಜಿಲ್ಲಾ ಸುದ್ದಿಗಳು

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್‌ ನೀಡಿ ಕ್ಷಮೆಯಾಚಿಸಿ ಅಧಿಕಾರಿಗಳು

ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ನೋಟಿಸ್‌.

ಅಕ್ಷರ ಸಂತ ಹಾಜಬ್ಬ ಅವರಿಗೆ ಎಸ್‌ಐಆರ್‌ ಪರಿಶೀಲನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್‌ ನೀಡಿತ್ತು. 2002ರ ಹಳೆಯ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬ ಅವರ ಹೆಸರು ಕೇವಲ ‘ಹಾಜಬ್ಬ’ ಎಂದು ದಾಖಲಾಗಿತ್ತು. ಬಳಿಕ ದಾಖಲೆಗಳಲ್ಲಿ ‘ಹರೇಕಳ ಹಾಜಬ್ಬ’ ಎಂದು ನಮೂದಾಗಿರುವುದರಿಂದ ಹೆಸರು ಹೊಂದಾಣಿಕೆಯಲ್ಲಿ ವ್ಯತ್ಯಾಸ ಕಂಡುಬಂದಿತ್ತು.ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಪರಿಶೀಲನಾ ಪ್ರಕ್ರಿಯೆಯ ಭಾಗವಾಗಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಸೆಪ್ಟೆಂಬರ್ 11ರಂದು ಗ್ರಾಮ ಪಂಚಾಯಿತಿಗೆ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದರು.(SIR) ನೋಟಿಸ್‌ ನೀಡಿ ಕ್ಷಮೆಯಾಚಿಸಿರುವ ಪ್ರಸಂಗ ನಡೆದಿದೆ. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಹಾಜಬ್ಬರ ಮನೆಗೆ ಆಗಮಿಸಿ ದಾಖಲೆಗಳನ್ನು ಪಡೆದುಕೊಂಡು ಹೋಗಿದ್ದಾರೆ.

ಕಾಮೆಂಟ್ ಬಿಡಿ

Join Us