ಜಿಲ್ಲಾ ಸುದ್ದಿಗಳು

ರಾಜ್ಯದಲ್ಲಿ ಮತ್ತೊಂದು ಸುತ್ತಿನ ಸಮವಸ್ತ್ರ ಸಮರ

ಮೈಸೂರು: ಕರ್ನಾಟಕದ ಶಾಲಾ,ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಿಜಾಬ್‌ ಸೇರಿದಂತೆ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿರೋದೀಗ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಸಮವಸ್ತ್ರ ಸಮರಕ್ಕೆ ನಾಂದಿ ಹಾಡಿದೆ. ಒಂದು ಸಮುದಾಯದ ಮನವೊಲಿಕೆಗೆ ಇಳಿದಿರುವ ಕಾಂಗ್ರೆಸ್ ಸರ್ಕಾರ​​, ಕೋರ್ಟ್​​ ಆದೇಶವನ್ನೇ ಗಾಳಿಗೆ ತೂರಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ವಸ್ತ್ರಸಂಹಿತೆಯನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು ಎಂದು ವಿಪಕ್ಷಗಳು ಮುಗಿಬಿದ್ದಿವೆ. ಹೀಗಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾವು ಹಿಜಾಬ್‌ಗೆ ಮಾತ್ರ ಅವಕಾಶ ಕೊಟ್ಟಿಲ್ಲ, ಜನಿವಾರ, ಶಿವದಾರ, ರುದ್ರಾಕ್ಷಿ, ಪೇಟಕ್ಕೂ ಅವಕಾಶ ಕೊಟ್ಟಿದ್ದೇವೆ. ಆದರೆ ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ, ಕೇಸರಿ ಪೇಟಕ್ಕೂ ಕೂಡ ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ. ಮೊದಲಿನಿಂದ ಯಾವ ಪೇಟಗಳಿತ್ತು, ಆ ಪೇಟಗಳಿಗಷ್ಟೇ ಅವಕಾಶ ಇರಲಿದೆ. ಈಗ ಪೇಟಕ್ಕೆ ಬಣ್ಣದ ಬದಲಾವಣೆ ಮಾಡಿಕೊಂಡರೆ ಅವಕಾಶ ಇಲ್ಲ ಎಂದಿದ್ದಾರೆ.

ಕಾಮೆಂಟ್ ಬಿಡಿ

Join Us