ರಾಷ್ಟ್ರೀಯ ಹೆದ್ದಾರಿಯ ಕೂಳೂರು ಬಳಿ ಭೀಕರ ಅಪಘಾತ ಸದಾನಂದ ಶೆಟ್ಟಿಗಾರ್ ಸಾವು
ಮಂಗಳೂರು: ನಗರದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ಬಳಿಯ ವಿ.ಆರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರನೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಂಟೈನರ್ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸವಾರನ ಮೇಲೆಯೇ ಹರಿದಿದ್ದರಿಂದ ಈ ದಾರುಣ ಘಟನೆ ಸಂಭವಿಸಿದೆ.

ಮೃತರು ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿರುವಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಚಾಲಕ ಮಹಮ್ಮದ್ ಅಜರುದ್ದೀನ್ ಚಲಾಯಿಸುತ್ತಿದ್ದ ಕಂಟೈನರ್ ಲಾರಿ ಡಿಕ್ಕಿಯಾಗಿದೆ.
ಇನ್ನು ಚಾಲಕ ಮಹಮ್ಮದ್ ಅಜರುದ್ದೀನ್ ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಲಾರಿ ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿ ಪಡಿಸಿದ್ದಾರೆ. ಘಟನೆ ವೇಳೆ ಲಾರಿ ಸವಾರನ ಮೇಲೆ ಚಲಿಸಿ ಸ್ಕೂಟರ್ ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸದಾನಂದ ಶೆಟ್ಟಿಗಾರ್ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಳೆಯಂಗಡಿ ಬಳಿಯ ತೋಕೂರು ನಿವಾಸಿ ಸದಾಶಿವ ಶೆಟ್ಟಿಗಾರ್(46) ಮೃತರು. ಇವರು ವೃತ್ತಿಯಲ್ಲಿ ಇನ್ಸೂರೆನ್ಸ್ ಏಜಂಟ್ ಆಗಿದ್ದು ಮಂಗಳೂರಿಗೆ ಕಾರ್ಯ ನಿಮಿತ್ತ ಬಂದು ಸಂಜೆ ವೇಳೆಗೆ ಮನೆಯತ್ತ ತೆರಳುತ್ತಿದ್ದರು. ಭಾರೀ ಮಳೆಯ ನಡುವೆ ಟ್ರಾಫಿಕ್ ದಟ್ಟಣೆ ಇರುವಾಗಲೇ ಕುಳೂರು ವಿಆರ್ ಎಲ್ ಕಚೇರಿ ಮುಂಭಾಗದಲ್ಲಿ ಅಪಘಾತ ನಡೆದಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್ ಬಿಡಿ