ದೇಶದ ಹಿತಾಸಕ್ತಿ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ: ಧರ್ಮೇಂದ್ರ ಪ್ರಧಾನ್
ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ದೆಹಲಿ ಜಂತರ್ ಮಂತರ್ನಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕೆಂದು ಪಟ್ಟು ಹಿಡಿದಿತ್ತು. ಹೀಗಾಗಿ ಅಂತಿಮವಾಗಿ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ʻಈ ವಿಚಾರವನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆʼ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿದ್ಯಾರ್ಥಿಗಳ ಮೂರು ಬೇಡಿಕೆಗಳಿಗೆ ಒಪ್ಪಿದ ಕೇಂದ್ರ ಸರ್ಕಾರ
- ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ವಾಪಸ್ ಪಡೆದು, ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು.
- ಧರ್ಮೇಂದ್ರ ಪ್ರಧಾನ್ ರಾಜೀನಾಮೆ.
- ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ಕೊಡಬೇಕು.
ಕಾಮೆಂಟ್ ಬಿಡಿ