ಬಕ್ರೀದ್ ಸಂಭ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಯಿಂದ ಜನತೆಗೆ ಶುಭಾಶಯ
ನವದೆಹಲಿ: ದೇಶಾದ್ಯಂತ ಮುಸ್ಲಿಂ ಸಮುದಾಯದಲ್ಲಿ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಸಂಭ್ರಮ ಮನೆಮಾಡಿದೆ. ಈ ಪವಿತ್ರ ಹಬ್ಬದ ಶುಭಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಬ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೃತ್ತೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಹಬ್ಬವು ಸಹೋದರತ್ವ, ತ್ಯಾಗ, ಭಕ್ತಿ ಮತ್ತು ಮಾನವೀಯ ಸೇವೆಯಂತಹ ಉನ್ನತ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಗಣ್ಯರು ತಮ್ಮ ಸಂದೇಶಗಳಲ್ಲಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ 'ಎಕ್ಸ್' ಮೂಲಕ ಶುಭಾಶಯಗಳನ್ನು ಹಂಚಿಕೊಂಡಿದ್ದು, "ಈದ್ ಉಲ್-ಅಧಾ ಶುಭಾಶಯಗಳು. ಈ ಹಬ್ಬವು ನಮ್ಮ ಸಮಾಜದಲ್ಲಿ ಸಹೋದರತ್ವ ಮತ್ತು ಸಂತೋಷದ ಮನೋಭಾವವನ್ನು ಇನ್ನಷ್ಟು ಬಲಪಡಿಸಲಿ. ಎಲ್ಲರ ಜೀವನದಲ್ಲಿ ಯಶಸ್ಸು ಮತ್ತು ಉತ್ತಮ ಆರೋಗ್ಯ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ. ಹಬ್ಬಗಳು ಸಾಮಾಜಿಕ ಬಾಂಧವ್ಯವನ್ನು ಗಟ್ಟಿಗೊಳಿಸುವುದರ ಜೊತೆಗೆ ದೇಶದಲ್ಲಿ ಏಕತೆ ಮತ್ತು ಸೌಹಾರ್ದತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ಒತ್ತಿಹೇಳಿದ್ದಾರೆ.
ಇದೇ ವೇಳೆ, ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ಕೂಡ ದೇಶವಾಸಿಗಳಿಗೆ, ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯದ ಸಹೋದರ-ಸಹೋದರಿಯರಿಗೆ ಹೃತೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಈದ್ ಅಲ್-ಅಧಾ ಹಬ್ಬವು ಸ್ವಯಂ ಶರಣಾಗತಿ, ತ್ಯಾಗ ಮತ್ತು ಭಕ್ತಿಯ ಸಂಕೇತವಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಹಬ್ಬವು ಮಾನವೀಯತೆಗಾಗಿ, ವಿಶೇಷವಾಗಿ ವಂಚಿತ ವರ್ಗಗಳ ಸೇವೆಗೆ ನಮ್ಮನ್ನು ಪ್ರೇರೇಪಿಸಲಿ ಎಂದು ರಾಷ್ಟ್ರಪತಿ ತಮ್ಮ ಸಂದೇಶದಲ್ಲಿ ಆಶಿಸಿದ್ದಾರೆ.
ಕಾಮೆಂಟ್ ಬಿಡಿ