ಮುಂಗಾರು ಪ್ರವೇಶ ಕೇರಳದಲ್ಲಿ ಭಾರಿ ಮಳೆ
ಮಂಗಳೂರು : ದೇಶದ ಆರ್ಥಿಕತೆಯ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಾರುತಗಳು ಮೂರು ದಿನ ತಡವಾಗಿ ಕೊನೆಗೂ ಭಾರತವನ್ನು ಅಧಿಕೃತವಾಗಿ ಪ್ರವೇಶಿಸಿವೆ. ಮುಂಗಾರು ಮಾರುತಗಳು ಕೇರಳ ಕರಾವಳಿಯನ್ನು ತಲುಪಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿದೆ. ಜೂನ್ ಮೊದಲ ವಾರದಲ್ಲೇ ಮುಂಗಾರು ನಿಗದಿತ ಸಮಯಕ್ಕೆ ಸರಿಯಾಗಿ ಆರಂಭವಾಗಿರುವುದರಿಂದ ದೇಶಾದ್ಯಂತ ಕೃಷಿ ಚಟುವಟಿಕೆಗಳಿಗೆ ಚಾಲನೆ ಸಿಕ್ಕಂತಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಮುಂಗಾರು ಆಗಮನದ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯಾದ್ಯಂತ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಕಾಮೆಂಟ್ ಬಿಡಿ