ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್: ಕೇಂದ್ರ, ಪೊಲೀಸರಿಗೆ ಹೈಕೋರ್ಟ್ ನೋಟಿಸ್
ನವದೆಹಲಿ: ಸಿಜೆಪಿ ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರ ಮೇಲಿನ ಹಿಂಸಾಚಾರ ಹಾಗೂ ಲಾಠಿಚಾರ್ಜ್ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಜುಲೈ 20 ರಂದು ನಡೆದ ಸಂಸತ್ ಚಲೋ ಮೆರವಣಿಗೆಯ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಹೈಕೋರ್ಟ್ ಈ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ವಿಭಾಗೀಯ ಪೀಠವು, ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರಿಗೆ *4 ವಾರಗಳ ಒಳಗೆ ಕೌಂಟರ್ ಅಫಿಡವಿಟ್ (ಪ್ರತಿಜ್ಞಾಪತ್ರ) ಸಲ್ಲಿಸುವಂತೆ ನಿರ್ದೇಶಿಸಿದೆ.
ಜುಲೈ 20ರ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು, ವಿಡಿಯೋಗ್ರಫಿ ಹಾಗೂ ಬಾಡಿ-ಕ್ಯಾಮ್ ದೃಶ್ಯಾವಳಿಗಳನ್ನು ತಕ್ಷಣವೇ ಸುರಕ್ಷಿತವಾಗಿ ಸಂರಕ್ಷಿಸಿಡಬೇಕು ಎಂದು ದೆಹಲಿ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.
ಘಟನೆಗೆ ಕಾರಣರಾದ ಹಾಗೂ ವಿಡಿಯೋಗಳಲ್ಲಿ ಗುರುತಿಸಬಹುದಾದ ಪೊಲೀಸ್ ಸಿಬ್ಬಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿ, ಸ್ವತಂತ್ರ ತನಿಖೆ ನಡೆಸಬೇಕು ಎಂದು ಮನವಿ ಮಾಡಲಾಯಿತು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು 2026 ಸೆಪ್ಟೆಂಬರ್ 11ಕ್ಕೆ ಕಾಯ್ದಿರಿಸಲಾಗಿದೆ.
ಕಾಮೆಂಟ್ ಬಿಡಿ