ರಾಜ್ಯ ಸುದ್ದಿ

ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ; ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

ಶಿವಮೊಗ್ಗ: ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಆಗುಂಬೆ ಘಾಟಿ 169ಎ ಹೆದ್ದಾರಿ ರಸ್ತೆಯಲ್ಲಿ ಸಂಚಾರ ಬಂದ್ ಮಾಡಿದ್ದು, ಭಾರೀ ವಾಹನಗಳ ಓಡಾಟಕ್ಕೆ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ಮಲ್ಪೆ – ಆಗುಂಬೆ ಹೆದ್ದಾರಿ ರಸ್ತೆಯಾಗಿರುವ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ನೀಡಿದ್ದಾರೆ. 

ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಸೂಚನೆ ನೀಡಿದ್ದು, ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. 

ಕಾಮೆಂಟ್ ಬಿಡಿ

Join Us