ರಾಜ್ಯ ಸುದ್ದಿ

ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆಯ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಿಸಿದೆ

ಬೆಂಗಳೂರು: ಕರ್ನಾಟಕದ ವಾತಾವರಣದಲ್ಲಿ ಬದಲಾವಣೆ ಕಾಣಿಸಿಕೊಂಡಿದ್ದು, ರಾಜ್ಯದ 23 ಜಿಲ್ಲೆಗಳಿಗೆ ಭಾರಿ ಮಳೆಯ ಸಾಧ್ಯತೆಯಿಂದಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ಸೇರಿದಂತೆ ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೇ 17ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ 
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಲಘುವಾದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ, ಜಗಳೂರು, ಹರಪನಹಳ್ಳಿ, ಬೇಗೂರು, ಕೋಣನೂರು, ಚಿಂತಾಮಣಿ, ಚಿತ್ತಾಪುರ, ಹುಣಸೂರು, ಹೊಸಕೋಟೆ, ರಾಯಲ್ಪಾಡು, ಎಲೆಕ್ಟ್ರಾನಿಕ್ಸ್ ಸಿಟಿ, ಚಾಮರಾಜನಗರ, ಲಕ್ಷ್ಮೇಶ್ವರ, ಬೀದರ್, ನಾಯಕನಹಟ್ಟಿ, ಹಿರಿಯೂರು, ನಾಪೋಕ್ಲು, ಕಡೂರು, ಅಂಕೋಲಾ, ಚಿಕ್ಕಬಳ್ಳಾಪುರ, ಬೆಂಗಳೂರು ಕೆಐಎಎಲ್, ಕಳಸ, ಶಿಗ್ಗಾಂವ್, ಚಿಟಗುಪ್ಪ, ಲೋಂಡಾ, ಮತ್ತು ಗೋಕರ್ಣದಂತಹ ಪ್ರದೇಶಗಳಲ್ಲಿ ಈಗಾಗಲೇ ಮಳೆಯಾಗಿದೆ. ಈ ಪ್ರದೇಶಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳ ಈ ಪ್ರದೇಶಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಕಾಮೆಂಟ್ ಬಿಡಿ

Join Us