ರಾಜ್ಯ ಸುದ್ದಿ

ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌:ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗಿದೆ.
ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು ಹೆಚ್ಚಳ ಮಾಡಬೇಕೆಂಬ ಬಗ್ಗೆ ಸಮಾಲೋಚನೆ ಮಾಡಲಾಯಿತು. ಅಂತಿಮವಾಗಿ 4 ರೂಪಾಯಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕಾಮೆಂಟ್ ಬಿಡಿ

Join Us