ಸುರತ್ಕಲ್: ನೀರಿನ ಸಮಸ್ಯೆಯ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಸುರತ್ಕಲ್: ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ ಹಲವು ಬಾರಿ ಮನವಿಯನ್ನು ಸಲ್ಲಿಸಿಯು ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ ಪಾಲಿಕೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾಡಿದ ಸಂಘಟನೆಯ ಅಧ್ಯಕ್ಷ ಶಂಶುದ್ದೀನ್ ಅವರು, “ನೀರಿನ ಸಮಸ್ಯೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಸ್ನಾನ ಮಾಡದೇ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ಇತ್ತಕಡೆ ತಿರುಗಿಯೂ ನೋಡುತ್ತಿಲ್ಲ. ಹೀಗಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದರು.

ಪ್ರತಿಭಟನೆಗೆ ಸುರತ್ಕಲ್, ಚೊಕ್ಕಬೆಟ್ಟು, ಕೃಷ್ಣಾಪುರ, ಕಾಟಿಪಳ್ಳ ಪರಿಸರದ ನಾಗರಿಕರು ಬೆಂಬಲ ನೀಡಿದ್ದರು. ಬಳಿಕ ಮಹಾನಗರ ಪಾಲಿಕೆ ಕಚೇರಿಗೆ ಕಾಲ್ನಡಿಯಲ್ಲಿ ತೆರಳಿ ಮನವಿಯನ್ನು ಸಲ್ಲಿಸಲಾಯಿತು. ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್ ಬಿಡಿ