ರಾಷ್ಟ್ರೀಯ ಸುದ್ದಿ

ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪ ನೆಲಕ್ಕುರುಳಿದ ಗಗನಚುಂಬಿ ಕಟ್ಟಡ

ಬ್ಯಾಂಕಾಕ್: ಶುಕ್ರವಾರ ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 3 ಸಾವು, 90 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಥಾಯ್ಲೆಂಡ್ ನವ್ವಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ತೀವ್ರತೆ ಪ್ರಮಾಣ 7.7ರಷ್ಟು ದಾಖಲಾಗಿದೆ.
ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಕಂಪನ ಸಂಭವಿಸಿದೆ. ಪರಿಣಾಮ ಬ್ಯಾಂಕಾಕ್ ನಲ್ಲಿ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದಿದೆ. ಇಲ್ಲಿ ಕನಿಷ್ಠ 3 ಮಂದಿ ಸಾವಿಗೀಡಾಗಿ 90 ಮಂದಿ ನಾಪತ್ತೆಯಾಗಿದ್ದಾರೆ. ಅಂತೆಯೇ ಇಲ್ಲಿಯವರೆಗೆ ಏಳು ಜನರನ್ನು ರಕ್ಷಿಸಲಾಗಿದೆ ಎಂದು ಹೇಳಲಾಗಿದೆ.

ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಕಟ್ಟಡವು ಕುಸಿದಿದ್ದು ಅದರಡಿಯಲ್ಲಿ ಹಲವು ಕಾರ್ಮಿಕರು ಸಿಲುಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ತುರ್ತು ಪರಿಸ್ಥಿತಿ ಘೋಷಣೆ

ಇನ್ನು ಭೂಕಂಪದ ಪರಿಣಾಮವಾಗಿ ಥಾಯ್ ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರಾ ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಭೂಕಂಪನಕ್ಕೆ 20 ಸಾವು ಇನ್ನು ಥಾಯ್ಲೆಂಡ್ ಮಾತ್ರವಲ್ಲದೇ ನೆರೆಯ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ನಲ್ಲೂ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ಮೂರು ದೇಶಗಳಲ್ಲಿ ಸಂಭವಿಸಿದ ವಿವಿಧ ಅವಘಡಗಳಲ್ಲಿ ಈ ವರೆಗೂ ಕನಿಷ್ಠ 20 ಮಂದಿ ಸಾವಿಗಿಡಾಗಿದ್ದಾರೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದ ಢಾಕಾ ಮತ್ತು ಚಟ್ಟೋಗ್ರಾಮ ಸೇರಿದಂತೆ ವಿವಿಧ ಭಾಗಗಳಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ ತೀವ್ರತೆ ಪ್ರಮಾಣ 7.3ರಷ್ಟು ದಾಖಲಾಗಿದೆ.

ಯಾನ್ಮಾರ್‌ನಲ್ಲಿ 18 ಜನರು ಹಾಗೂ ಥಾಯ್ಲೆಂಡ್‌ ರಾಜಧಾನಿ ಬ್ಯಾಂಕಾಕ್‌ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಾಂಗ್ಲಾದಲ್ಲಿ ಸಾವು– ನೋವಿನ ಬಗ್ಗೆ ವರದಿಯಾಗಿಲ್ಲ. ಅತ್ತ ಮ್ಯಾನ್ಮಾರ್‌ನ ಮಂಡಲೆ ಬಳಿ 90 ವರ್ಷ ಹಳೆಯ ಸೇತುವೆ ಕುಸಿದಿದೆ. ಇದು ಮಂಡಲೆ ಮತ್ತು ಮ್ಯಾನ್ಮಾರ್‌ನ ಪ್ರಮುಖ ನಗರ ಯಾನ್ಗಾಂಗ್‌ಗೆ ಸಂಪರ್ಕ ಕಲ್ಪಿಸುತ್ತಿತ್ತು.

ನೆಲಕ್ಕುರುಳಿದ ಗಗನಚುಂಬಿ ಕಟ್ಟಡ ಭೂಕಂಪದ ತೀವ್ರತೆಗೆ ಬ್ಯಾಂಕಾಕ್‌ನ ಬಹುಮಹಡಿ ಕಟ್ಟಡವು ಧರೆಗುರುಳಿ ಧೂಳು ಎಬ್ಬಿಸಿದ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಬ್ಯಾಂಕಾಕ್‌ನ ಚತುಚಕ್‌ ಮಾರುಕಟ್ಟೆ ಪ್ರದೇಶದಲ್ಲಿ ಕಟ್ಟಡ ಕುಸಿತ ಸಂಭವಿಸಿದ ದುರ್ಘಟನೆಯಲ್ಲಿ ಎಷ್ಟು ಕಾರ್ಮಿಕರು ಸಿಲುಕಿದ್ದಾರೆ ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇಲ್ಲ. 

ಕಾಮೆಂಟ್ ಬಿಡಿ

Join Us