ಶಿಕ್ಷಕರನ್ನು ಸನ್ಮಾನಿಸುವ ಮೂಲಕ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ
ಬೆಳ್ಳಂಪಳ್ಳಿ: ಜೈಹಿಂದ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೆಳ್ಳಂಪಳ್ಳಿಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಹಾಗೂ ಪ್ರಸ್ತುತ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮಿಕಾಂತ ಅವರು ತಮ್ಮ ಶಾಲೆಯ ಮೇಲಿನ ಅಭಿಮಾನ ಹಾಗೂ ಗೌರವವನ್ನು ವ್ಯಕ್ತಪಡಿಸುವ ನಿಟ್ಟಿನಲ್ಲಿ ಜೈಹಿಂದ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯರಾದ ಮಲ್ಲಿಕಾ, ಸುರೇಖಾ, ಶಾರದಾ ಹಾಗೂ ಶಿಕ್ಷಕರಾದ ಅರುಣ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು.
ತಾನು ವಿದ್ಯಾಭ್ಯಾಸ ಮಾಡಿದ ಶಾಲೆಯ ಶಿಕ್ಷಕರನ್ನು ನೆನಪಿಸಿಕೊಂಡು, ಅವರ ಸೇವೆಯನ್ನು ಗುರುತಿಸಿ ಗೌರವಿಸುವ ಮೂಲಕ ಲಕ್ಷ್ಮಿಕಾಂತ ಅವರು ಶಿಕ್ಷಕರ ದಿನಾಚರಣೆಗೆ ವಿಶೇಷ ಅರ್ಥವನ್ನು ನೀಡಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ತಾವು ಕಲಿತ ಶಾಲೆ ಹಾಗೂ ತಮ್ಮನ್ನು ರೂಪಿಸಿದ ಗುರುಗಳನ್ನು ಮರೆಯದೆ ಗೌರವಿಸುವ ಹಳೆ ವಿದ್ಯಾರ್ಥಿಗಳ ನಡೆ ನಿಜಕ್ಕೂ ಶ್ಲಾಘನೀಯವಾಗಿದೆ.
ತಮ್ಮ ಶಾಲೆಯ ಶಿಕ್ಷಕರನ್ನು ಗುರುತಿಸಿ ಗೌರವಿಸಿದ ಲಕ್ಷ್ಮಿಕಾಂತ ಅವರಿಗೆ ಶಾಲಾ ಸಂಚಾಲಕರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಮುದ್ದು ಮಕ್ಕಳ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಮತ್ತು ಕೃತಜ್ಞತೆಗಳು.
ಕಾಮೆಂಟ್ ಬಿಡಿ