ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನದಲ್ಲಿ ಮಾಲಾಧಾರಿ ಆತ್ಮಹತ್ಯೆ.
ಕೇರಳ: ಪಟ್ಟಿನಂತಿಟ್ಟ ಜಿಲ್ಲೆಯ ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನದಲ್ಲಿ ಮಾಲಾಧಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಮೃತ ವ್ಯಕ್ತಿಯನ್ನು ತಮಿಳುನಾಡಿನ ತಿರುವಳ್ಳುವರ್ ಜಿಲ್ಲೆಯ ಜಗನ್ ಸಂಪತ್ ಎಂದು ಗುರುತಿಸಲಾಗಿದೆ.ಪೊಲೀಸರಿಂದ ದೊರೆತ ಮಾಹಿತಿ ಪ್ರಕಾರ, ಜಗನ್ ಸಂಪತ್ ಸೋಮವಾರ ಸಂಜೆ ಶಬರಿಮಲೆ ಏರಿದ್ದು, ಬಳಿಕ ದೇವಸ್ಥಾನದ ಆವರಣದಲ್ಲಿರುವ ತುಪ್ಪದ ಅಭಿಷೇಕ ಕೌಂಟರ್‌ನ ಮೇಲ್ಛಾವಣಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆ ನಡೆಯುತ್ತಿದ್ದಂತೇ ಸ್ಥಳದಲ್ಲಿದ್ದವರು ತಕ್ಷಣವೇ ದೇವಸ್ಥಾನದ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ. ಇದಾದ ನಂತರ ಅವರಿಗೆ ವೈದ್ಯಕೀಯ ನೆರವು ನೀಡಲಾಯಿತು, ಆದರೆ ಅತಿಯಾದ ರಕ್ತಸ್ರಾವದಿಂದ ಆಸ್ಪತ್ರೆ ತಲುಪುವ ಮೊದಲೇ ಸಾವನ್ನಪ್ಪಿದ್ದಾರೆ. ಇನ್ನು ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಸಂಬಂಧ ಶಬರಿಮಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್ ಬಿಡಿ