ಪದ್ಮವಾಣಿ

64ನೇ ವಾರ್ಷಿಕ ಮಹಾಸಭೆ;ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲ ಹಾಗೂ ಮಹಿಳಾ ವೇದಿಕೆ,ಕಲ್ಲಾಪು

ಕಲ್ಲಾಪು: ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕ ಮಂಡಲ ಹಾಗೂ ಮಹಿಳಾ ವೇದಿಕೆ,ಕಲ್ಲಾಪು,ಹಳೆಯಂಗಡಿ ಇದರ 64ನೇ ವಾರ್ಷಿಕ ಮಹಾಸಭೆ ಮತ್ತು ಪುಸ್ತಕ ಹಾಗೂ ಪರಿಕರ ವಿತರಣೆಯು ದಿನಾಂಕ: 24-05-2026ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9.30ರಿಂದವವಾಚನಾಲಯದ ಅಧ್ಯಕ್ಷರಾದ ಶ್ರೀ ಹರಿಪ್ರಸಾದ್ ಕೊಲ್ನಾಡು ಇವರ ಅಧ್ಯಕ್ಷತೆಯಲ್ಲಿ ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಶ್ರೀ ವೀರಭದ್ರ ಸಭಾಭವನದಲ್ಲಿ ಜರಗಲಿರುವುದು.

ಕಲ್ಲಾಪು ದೇವಸ್ಥಾನದ ಕೂಡುಕಟ್ಟಿಗೆ ಸೇರಿದ ಪದ್ಮಶಾಲಿಗರಿಗೆ ಸ್ನಾತಕೋತ್ತರ ಪದವಿ, ವೈದ್ಯಕೀಯ ಶಿಕ್ಷಣ ಪದವಿ, ಇಂಜಿನಿಯರಿಂಗ್ ಪದವಿ ಹಾಗೂ ಉನ್ನತ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳನ್ನು ಮತ್ತು ಧಾರ್ಮಿಕ, ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರನ್ನು ,ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲಿ ಹಾಗೂ ಎಸ್.ಎಸ್.ಎಲ್.ಸಿ.ಯಲ್ಲಿ 90% ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಗುವುದು.

ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿಯ ಮೂರು ವಿಭಾಗಗಳಲ್ಲಿ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗೆ ವಾಚನಾಲಯ ಮತ್ತು ದಾನಿಗಳು ನೀಡಿರುವ ವಿಶ್ವಸ್ಥ ನಿಧಿಯಲ್ಲಿ ಬರುವ ಬಡ್ಡಿಯಿಂದ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿಯ ಮೂರು ವಿಭಾಗಗಳಲ್ಲಿ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗೆ ಹಾಗೂ ಎಸ್.ಎಸ್.ಎಲ್.ಸಿ. ಗಣಿತ ವಿಭಾಗದಲ್ಲಿ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗೆ ಪ್ರೋತ್ಸಾಹಕ ಧನವನ್ನು ನೀಡಲಾಗುವುದು.

ಕಾಮೆಂಟ್ ಬಿಡಿ

Join Us