ಬೆಂಗಳೂರು: ಕಾಣೆಯಾಗಿರುವ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಕೇಂದ್ರ ಸರ್ಕಾರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ 19ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಕಾಗದ ಪತ್ರಗಳನ್ನು ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಈ ಒತ್ತಾಯ ಮಾಡಿದ್ದಾರೆ.

2,750 ಪುಟಗಳ ಕಾಗದ ಪತ್ರಗಳನ್ನು ಸಭಾಧ್ಯಕ್ಷರಿಗೆ ನೀಡಲಾಗಿದೆ. ವಿಧಾನಸಭೆಯಲ್ಲಿ ಚುನಾವಣಾ ಸುಧಾರಣೆಯ ಬಗ್ಗೆ ಚರ್ಚೆ ನಡೆದ ಸಂದರ್ಭದಲ್ಲಿ ಭಾಗಿಯಾಗಿ ಬಹಳಷ್ಟು ವಿಚಾರಗಳನ್ನು ನಾನು ಪ್ರಸ್ತಾಪಿಸಿದ್ದೆ. ಅದಕ್ಕೆ ಪೂರಕ ಪುರಾವೇ ಹಾಗೂ ಕಾಗದ ಪತ್ರಗಳನ್ನು ಇಂದು ಸಭಾಧ್ಯಕ್ಷರಿಗೆ ಸಲ್ಲಿಸಿದ್ದೇನೆ ಎಂದರು.
ಸದನದಲ್ಲಿ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಜತೆಗೆ ಇವಿಎಂ ಮಿಷನ್ ಹ್ಯಾಕ್ ಮಾಡುವ ಬಗ್ಗೆಯೂ ಬಹಳಷ್ಟು ಜನರಿಗೆ ಅನುಮಾನ ಇರುವ ವಿಚಾರವನ್ನು ಪ್ರಸ್ತಾಪಿಸಲಾಗಿತ್ತು. ಇದನ್ನು ಹೋಗಲಾಡಿಸಬೇಕಾದರೆ ಎಥಿಕಲ್ ಹ್ಯಾಕಥಾನ್ ಆಗಬೇಕು. ಇದನ್ನು ಭಾರತದ ಚುನಾವಣಾ ಆಯೋಗ ಮಾಡಬೇಕು ಎಂದು ಹೇಳಿದರು.
- ನ್ಯೂಸ್ ಬ್ಯೂರೋ true news ಕನ್ನಡ