ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ. ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಯಲ್ಲಿ ಮಳೆಗಾಲದ ವಾತಾವರಣ ಸೃಷ್ಟಿಯಾಗಿದೆ.
ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅಸಾನಿ ಚಂಡಮಾರುತದಿಂದಾಗಿ ಅಬ್ಬರದ ಮಳೆ ಸುರಿಯುತ್ತಿದೆ. ಜಿಲ್ಲೆಯ ಭಟ್ಕಳ, ಹೊನ್ನಾವರ, ಅಂಕೋಲಾ ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ಕರಾವಳಿ ಭಾಗದ ಕಡಲು ಪ್ರಕ್ಷುಬ್ದಗೊಂಡಿದೆ. ಕಳೆದ ಎರಡು ದಿನದಿಂದಲೂ ಕೆಂಡದಂತಿದ್ದ ಕರಾವಳಿ ಭಾಗದಲ್ಲಿ ಮಳೆ ತಂಪಾಗಿಸಿದೆ. ಅರಬ್ಬಿ ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏಳುತಿದ್ದು ಆಳ ಸಮುದ್ರದ ಮೀನುಗಾರಿಕೆಯನ್ನು ಬಂದ್ ಮಾಡಲಾಗಿದೆ.
- ನ್ಯೂಸ್ ಬ್ಯೂರೋ true news ಕನ್ನಡ