ಬಿಜೆಪಿ - ಟಿಎಂಸಿ ನಡುವಿನ ಹೋರಾಟ..! ಚುನಾವಣೆಯಿಂದ ಹಿಂದೆ ಸರಿದ ಕಾಂಗ್ರೆಸ್..!?

ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಎಲ್ಲರ ಚಿತ್ತ ಭವಾನಿಪುರ ಕ್ಷೇತ್ರದ ಕಡೆಗೆ ಮೂಡಿದೆ. ನಂದಿಗ್ರಾಮದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ಸೋತಿತ್ತು ಈಗ ಸಿಎಂ ಗಾದಿ ಉಳಿಸಿಕೊಳ್ಳಲು ಭವಾನಿಪುರದಲ್ಲಿ ಕಣಕ್ಕೆ ಇಳಿದಿದ್ದಾರೆ.

ಇನ್ನು ಮಮತಾ ಬ್ಯಾನರ್ಜಿಯನ್ನು ಇಲ್ಲೂ ಸೋಲಿಸುವ ಉಮೇದನ್ನು ಬಿಜೆಪಿ ವ್ಯಕ್ತಪಡಿಸಿದೆ. ಈ ಕುರಿತು ಕಳೆದೆರಡು ದಿನಗಳ ಹಿಂದೆ ಮಾತನಾಡಿದ ಬಿಜೆಪಿ ನಂದಿಗ್ರಾಮದಲ್ಲಿ ಸೋತ ಮಮತಾ ಭವಾನಿಪುರದಲ್ಲಿ ಗೆಲುವು ಸಾಧಿಸಲು ಸಾಧ್ಯವಾ ಎಂದು ಪ್ರಶ್ನಿಸಿದ್ದರು. ಸೆ. 30 ರಂದು ನಡೆಯುವ ಈ ಚುನಾವಣೆ ಮೇಲೆ ಮಮತಾ ಬ್ಯಾನರ್ಜಿ ಸಿಎಂ ಸ್ಥಾನದ ಭವಿಷ್ಯ ಉಳಿದಿದೆ.
ಪಶ್ಚಿಮ ಬಂಗಾಳದಲ್ಲಿ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ತೃಣಮೂಲ ಕಾಂಗ್ರೆಸ್ T M C ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಅಲ್ಲದೇ ತಾವು ಚುನಾವಣೆ ಎದುರಿಸಲು ಸಜ್ಜಾಗಿರುವುದಾಗಿ ತಿಳಿಸಿತ್ತು.

  • ಚುನಾವಣೆಯಿಂದ ಹಿಂದೆ ಸರಿದ ಕಾಂಗ್ರೆಸ್

ಇನ್ನು ಈ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ , ಭವಾನಿಪುರದಿಂದ ತಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ. ಈ ಮೂಲಕ ನಾವು ಬಿಜೆಪಿಗೆ ಸಹಾಯ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೈ ಕಮಾಂಡ್ ಸ್ಪಷ್ಟಪಡಿಸಿದೆ. ಈ ಹಿಂದೆ ಕೂಡ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಕೂಡ ಈ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಇರಾದೆ ಪಕ್ಷಕ್ಕೆ ಇಲ್ಲ ಎಂದು ತಿಳಿಸಿದ್ದರು. ಈ ಮೂಲಕ ಈ ಚುನಾವಣೆ ಬಿಜೆಪಿ ಮತ್ತು ಟಿಎಂಸಿ ನಡುವಿನ ಹೋರಾಟವಾಗಿ ಪರಿಗಣಿಸಲಾಗಿದ್ದು, ಕಾಂಗ್ರೆಸ್ ದೂರದಿಂದಲೇ ನಿಂತು ನೋಡುವ ಕೆಲಸಕ್ಕೆ ಮುಂದಾಗಿದೆ.

 

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.