ಬಂಟ್ವಾಳದಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಇಂದಿರಾ ಕ್ಷೇಮನಿಧಿ ಗೆ ಚಾಲನೆ.

ಬಂಟ್ವಾಳ: ಬಂಟ್ವಾಳದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಇಂದಿರಾ ಕ್ಷೇಮನಿಧಿ ಗೆ ಚಾಲನೆ ನೀಡಲಾಯಿತು. ಕೊರೋನಾ ನಿಂದ ಕಂಗೆಟ್ಟ ಜನರಿಗಾಗಿ ಸಹಾಯಮಾಡಲು ಇಂದಿರಾ ಕ್ಷೇಮ ನಿಧಿಯನ್ನು ಸ್ಥಾಪಿಸಲಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ.ಬಿ ಸಿ ರೋಡಿನ ರಂಗೋಲಿ ಸಭಾಭವನದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಬಂಟ್ವಾಳ ತಾಲೂಕಿನಲ್ಲಿ ಅವಶ್ಯಕ ಜನರಿಗೆ ಸಹಾಯವನ್ನು ಇಂದಿರಾ ಕ್ಷೇಮನಿಧಿ ಒದಗಿಸಲಿದೆ. ಅರ್ಹ ಜನರನ್ನು ಇಂದಿರಾ ಕ್ಷೇಮನಿಧಿ ಒಳಗಡೆ ಸೇರಿಸಲಾಗುವುದು ಎಂದು ಮಾಜಿ ಸಚಿವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಮ್ ಎಸ್ ಮೊಹಮ್ಮದ್,ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ವಿ ಶೆಟ್ಟಿ,ಬಂಟ್ವಾಳ ಪುರಸಭಾ ಅಧ್ಯಕ್ಷರಾದ ಮೊಹಮ್ಮದ್ ಶರೀಫ್, ಪುರಸಭಾ ಉಪಾಧ್ಯಕ್ಷರಾದ ಶ್ರೀಮತಿ ಜೇಸಿಂತ ಡಿಸೋಜ,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ,ಪಾಣೆಮಂಗಳೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಲ್ಬರ್ಟ್ ಮೆನೀಜಸ್,ಭೂ ಅಭಿರುದ್ದಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಸುದರ್ಶನ್ ಜೈನ್,ಪಾಣೆಮಂಗಳೂರು ಬ್ಲಾಕ್ ಹಾಗೂ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಇಬ್ರಾಹಿಂ ನವಾಝ್ ಬಡಕಬೈಲು ಮತ್ತು ಸುರೇಶ್ ಜೋರ,ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ ಉಪಸ್ಥಿತರಿದ್ದರು.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.