ಭಾರತರತ್ನ ಪುರಸ್ಕೃತೆ 92 ವರ್ಷದ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ..!?

ಮುಂಬೈ : ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮುಂಬೈನ ಬ್ರೀಚ್​​ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾರತರತ್ನ ಪುರಸ್ಕೃತೆ 92 ವರ್ಷದ ಲತಾ ಮಂಗೇಶ್ಕರ್ ಜನವರಿ 11ರಂದು ಆಸ್ಪತ್ರೆಗೆ ದಾಖಲಾಗಿದ್ದರು.

truenewskaanada

ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ವಿಸಿಟರ್​​​ಗಳ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ. ಕೊರೋನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಲತಾ ಆಸ್ಪತ್ರೆಗೆ ದಾಖಲಾಗಿದ್ದರು.

ಅವರ ಆರೋಗ್ಯ ಸ್ಥಿತಿ ಮೇಲೆ ಗಮನ ಹರಿಸಲಾಗುತ್ತದೆ. ನಿನ್ನೆಯಿಂದ ಇಂದು ಬೆಳಗ್ಗೆ ಅವರ ಆರೋಗ್ಯ ಸ್ವಲ್ಪ ವಿಷಮವಾಗಿದ್ದು, ತಜ್ಞ ವೈದ್ಯರು ಅಗತ್ಯವಾದ ಎಲ್ಲ ಚಿಕಿತ್ಸೆಗಳನ್ನೂ ಮುಂದುವರಿಸಿದ್ದಾರೆ ಎಂದು ತಜ್ಞ ವೈದ್ಯರೊಬ್ಬರು ತಿಳಿಸಿದ್ದಾರೆ.

ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಆ ಕುರಿತು ಲತಾ ಮಂಗೇಶ್ಕರ್​ ಪರ ವಕ್ತಾರರು ಅಸಮಾಧನ ವ್ಯಕ್ತಪಡಿಸಿದ್ದಾರೆ.ಲತಾ ಅವರ ಆರೋಗ್ಯ ಹದಗೆಡುತ್ತಿದೆ ಎಂಬ ಸುದ್ದಿ ನಿಜಕ್ಕೂ ಬೇಸರ ತರಿಸುವಂಥದ್ದು. ಯಾಕೆಂದರೆ ಅದು ನಿಜವಲ್ಲ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಆದಷ್ಟು ಬೇಗ ಅವರು ಗುಣಮುಖರಾಗಿ ಮನೆಗೆ ಮರಳಲಿ ಅಂತ ಎಲ್ಲರೂ ಪ್ರಾರ್ಥಿಸಿ’ ಎಂದು ವಕ್ತಾರರು ಹೇಳಿದ್ದಾರೆ. 

ಸೆ.28ರಂದು ತಮ್ಮ 90ನೆ ಹುಟ್ಟುಹಬ್ಬ ಆಚರಿಸಿಕೊಂಡಿರುವ ಲತಾ ಮಂಗೇಶ್ಕರ್ 70 ವರ್ಷಗಳಿಂದಲೂ ಭಾರತೀಯ ಗಾಯನ ಲೋಕಕ್ಕೆ ನೀಡಿರುವ ಕೊಡುಗೆ ಅನನ್ಯ.
ಲತಾ ಮಂಗೇಶ್ಕರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಅನೇಕ ಗಣ್ಯಾತಿಗಣ್ಯರು, ಬಾಲಿವುಡ್ ಖ್ಯಾತನಾಮರು ಮತ್ತು ಅಸಂಖ್ಯಾತ ಅಭಿಮಾನಿಗಳು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

  • ನ್ಯೂಸ್ ಬ್ಯೂರೋ, ಟ್ರೂನ್ಯೂಸ್ ಕನ್ನಡ.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.