ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕಾಲಿಕ ಮಳೆ ಜನ ಜೀವನ ತತ್ತರ..!

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಒಂದೆಡೆ ಕೊರೋನ ಅಬ್ಬರಕ್ಕೆ ಜನರು ಕಂಗಾಲಾಗಿದ್ದರೆ, ಮತ್ತೊಂದೆಡೆ ನಿರಂತರ ಮಳೆಯಿಂದಲೂ ಜನರು ಹೈರಾಣಾಗಿದ್ದಾರೆ. ಮಂಗಳವಾರ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಮರಗಳು ಧರೆಗುರುಳಿದ ಪರಿಣಾಮ ವಿದ್ಯುತ್ ಕಂಬಗಳು ತುಂಡಾಗಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಕಳೆದೊಂದು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಧ್ಯಾಹ್ನದ ವೇಳೆ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಬಯಲು ಭಾಗದಲ್ಲಿ ಆಗಾಗ್ಗೆ ಮಳೆಯಾಗುತ್ತಿತ್ತು. ಸೋಮವಾರ ಹಾಗೂ ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರ ಸೇರಿದಂತೆ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದೆ. ಕಡೂರು, ತರೀಕೆರೆ ತಾಲೂಕುಗಳ ಅಲ್ಲಲ್ಲಿ ಮಂಗಳವಾರ ಉತ್ತಮ ಮಳೆ ಸುರಿದಿದೆ. ಧಾರಾಕಾರ ಮಳೆಯಿಂದಾಗಿ ನಗರ ಸೇರಿದಂತೆ ವಿವಿಧ ಪಟ್ಟಣಗಳು, ಚೆಕ್‍ಪೋಸ್ಟ್ ಗಳಲ್ಲಿ ಲಾಕ್‍ಡೌನ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್, ಗೃಹರಕ್ಷಕ ಸಿಬ್ಬಂದಿ ಮಳೆಯಿಂದ ರಕ್ಷಣೆ ಪಡೆದುಕೊಳ್ಳಲು ಪರದಾಡಿದ ದೃಶ್ಯಗಳು ಸಾಮಾನ್ಯವಾಗಿದ್ದವು.ಮಂಗಳವಾರ ಜಿಲ್ಲೆಯ ಮಲೆನಾಡು ಭಾಗದ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಸತತ ಮಳೆಯಿಂದಾಗಿ ಮಲೆನಾಡಿನಲ್ಲಿ ಹರಿಯುವ ತುಂಗಾ, ಭದ್ರಾ, ಹೇಮಾವತಿ ನದಿಗಳೂ ಸೇರಿದಂತೆ ಹಳ್ಳಕೊಳ್ಳಗಳಲ್ಲಿ ನೀರಿನ ಹರಿವಿನಲ್ಲಿ ಕೊಂಚ ಏರಿಕೆಯಾಗಿದೆ.

dd

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ತಿಂಗಳಿನಿಂದ ಪ್ರತಿದಿನ ಸಂಜೆ, ರಾತ್ರಿ ಮಳೆಯಾಗುತ್ತಿರುವುದರಿಂದ ಕಾಫಿ, ಅಡಿಕೆ ತೋಟಗಳಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ಜನತಾ ಕರ್ಫ್ಯೂ, ಲಾಕ್‍ಡೌನ್ ಜಾರಿ ಮಾಡಿರುವುದರಿಂದ ಕೃಷಿ ಕೆಲಸಗಳಿಗೆ ಕಾರ್ಮಿಕರನ್ನು ಕರೆ ತರಲು ರೈತರು ಪರದಾಡುವಂತಾಗಿದೆ.

  • ಡ್ಯಾನಿ ಕೂದುವಳ್ಳಿ

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.