ದೇಶದ ಚಳಿಗಾಲದ ಕ್ರೀಡಾ ಕೇಂದ್ರವಾಗಲಿದೆ ಜಮ್ಮು & ಕಾಶ್ಮೀರ: ಪ್ರಧಾನಿ ಮೋದಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರವು ದೇಶದ ಚಳಿಗಾಲದ ಕ್ರೀಡಾ ಕೇಂದ್ರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

winter sports

ಗುಲ್‌ಮಾರ್ಗ್ನಲ್ಲಿ ಎರಡನೇ ಖೇಲೋ ಇಂಡಿಯಾ ವಿಂಟರ್ ಗೇಮ್ಸನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮವು ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಚಳಿಗಾಲದ ಕ್ರೀಡೆಗಳ ಕೇಂದ್ರವನ್ನಾಗಿ ಮಾಡುವ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

winter sports

27 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಅಥ್ಲೀಟ್‌ಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ. ಮಾರ್ಚ್ 2ರವರೆಗೆ ಈ ಕ್ರೀಡಾಕೂಟ ನಡೆಯಲಿದೆ. ಇದು ಅಂತರರಾಷ್ಟ್ರೀಯ ಚಳಿಗಾಲದ ಆಟಗಳ ರಂಗದಲ್ಲಿ ಭಾರತದ ಉಪಸ್ಥಿತಿಯನ್ನು ತೋರ್ಪಡಿಸುವ ಹಂತವಾಗಿದೆ. ಈ ಕ್ರೀಡಾಕೂಟಗಳು ಏಕ್ ಭಾರತ್, ಶ್ರೇಷ್ಠ ಭಾರತ್ ಸಂಕಲ್ಪವನ್ನು ಬಲಪಡಿಸುತ್ತವೆ ಎಂದು ಮೋದಿ ಹೇಳಿದ್ದಾರೆ.

winter sports
  • ಸ್ಪೋರ್ಟ್ಸ್ ಬ್ಯೂರೋ, ಟ್ರೂನ್ಯೂಸ್ ಕನ್ನಡ

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.