ದಂಪತಿಗಳ ಆತ್ಮಹತ್ಯೆ ನಂತರ ಕೋವಿಡ್‌ ಪರೀಕ್ಷೆ ...! ಕೊರೊನಾ ನೆಗೆಟಿವ್‌ ರಿಪೋರ್ಟ್‌ ..!?

ಮಂಗಳೂರು: ಇಂದು ಬೆಳ್ಳಂಬೆಳಿಗ್ಗೆ ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ  ಶರಣಾಗಿರುವ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ಈ ದಂಪತಿಗಳ ಸಾವಿನ ನಂತರ ಕೋವಿಡ್‌ ಪರೀಕ್ಷೆ ಮಾಡಿದಾಗ ನೆಗೆಟಿವ್‌ ರಿಪೋರ್ಟ್‌ ಬಂದಿದೆ. ಈ ಕುರಿತು   ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂಗಳೂರು ಡಿಸಿಪಿ ಹರಿರಾಂ ಶಂಕರ್, ಡೆತ್ ನೋಟಲ್ಲಿ ನಮಗೆ ಕೊರೊನಾ ಇದೆ, ಬ್ಲ್ಯಾಕ್ ಫಂಗಸ್ ಬಂದರೆ ಸಮಸ್ಯೆ ಎಂದು ಬರೆದಿದ್ದಾರೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಪ್ರಕಾರ ಅವರಿಗೆ ಕೊರೊನಾ ಸೋಂಕು ಇರಲಿಲ್ಲ ಎಂದರು.
ಆತ್ಮಹತ್ಯೆಗೆ ಶರಣಾಗಿದ್ದ ದಂಪತಿಯ ಮೃತದೇಹವನ್ನು ಟೆಸ್ಟ್ ಮಾಡಿದ ಬಳಿಕ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದೆ. ಪೋಸ್ಟ್ ಮಾರ್ಟಮ್​ಗೂ ಮುನ್ನ ನಡೆಸಿದ ಕೊವಿಡ್ ಟೆಸ್ಟ್​ನಲ್ಲಿ ರಿಪೋರ್ಟ್ ನೆಗೆಟಿವ್ ಎಂದು ತಿಳಿದು ಬಂದಿದೆ. ರಿಪೋರ್ಟ್ ನೆಗೆಟಿವ್ ಬೆನ್ನಲ್ಲೇ ಮೃತದೇಹವನ್ನು ಪೋಸ್ಟ್‌ ಮಾರ್ಟಮ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.  ಅವರೇ ಸ್ವಂತ ನಿರ್ಧಾರಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಸಲ ಮಗು ಪಡೆಯಲು ಯತ್ನಿಸಿ ವಿಫಲರಾಗಿದ್ದು, ಇದರ ಖಿನ್ನತೆ ಇರಬಹುದು. ಆದರೆ ಇವರು ಯಾರ ಜೊತೆಗೂ ಹೆಚ್ಚಾಗಿ ಬೆರೆತ ಬಗ್ಗೆ ಮಾಹಿತಿಯಿಲ್ಲ ಎಂದು ಡಿಸಿಪಿ ಹೇಳಿದ್ದಾರೆ.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.