ಹಿರಿಯ ನಾಗರಿಕರಿಗೆ ಮಾಸಾಶನ ಹೆಚ್ಚಳ; ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ.

ಹಿರಿಯ ನಾಗರಿಕರಿಗೆ

ಬೆಂಗಳೂರು :ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಹಿರಿಯ ನಾಗರಿಕರಿಗೆ ಸದ್ಯ 1200 ರು. ಮಾಸಾಶನ ನೀಡಲಾಗುತ್ತಿದೆ. ಇದನ್ನು 2000 ರು.ಗೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಳ ಮಾಡುವ ಕೆಲಸ ಮಾಡುತ್ತೇನೆ. ಆದರೆ ಎಷ್ಟು ಹೆಚ್ಚಳ ಮಾಡುತ್ತೇನೆ ಎಂದು ಈಗಲೇ ಹೇಳುವುದಿಲ್ಲ. ಪರಿಶೀಲನೆ ಮಾಡಿ ಮುಂದಿನ ಬಜೆಟ್‌ನಲ್ಲಿ ಮಾಸಾಶನ ಹೆಚ್ಚಳದ ಘೋಷಣೆ ಮಾಡುತ್ತೇನೆ ಎಂದು ಹೇಳಿದರು.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.