ಹವಮಾನ ಇಲಾಖೆ ಮುನ್ಸೂಚೆ : ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ.

ಮಂಗಳೂರು : ಅಸಾನಿ ಚಂಡಮಾರುತ ಪರಿಣಾಮ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ಕರ್ನಾಟಕದಲ್ಲಿ ಮಳೆ ಇನ್ನು ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚೆ ನೀಡಿದೆ.

ಈ ನಡುವೆ ಮುಂಗಾರು ಮಳೆಗೆ ಮುನ್ನವೇ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

  • ನ್ಯೂಸ್ ಬ್ಯೂರೋ  true news ಕನ್ನಡ 

 

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.