ಈಶ್ವರಪ್ಪ ತಮಾಷೆಯಾಗಿ ಹೇಳಿದ್ದಾರೆ..! ಯಾರೂ ಕನಸು ಕಾಣೋದು ಬೇಡ :ಕಂದಾಯ ಸಚಿವ ಆರ್. ಅಶೋಕ

ಬೆಂಗಳೂರು: ಮುರುಗೇಶ್ ನಿರಾಣಿ ಸಿಎಂ ಆಗಲಿದ್ದಾರೆ ಎಂದು  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಫೊಟಕ ಹೇಳಿಕೆ ನೀಡಿದ್ದರು. ಆ ಹೇಳಿಕೆ ವಿಚಾರವಾಗಿ ಕಂದಾಯ ಸಚಿವ ಆರ್. ಅಶೋಕ ಹೇಳಿಕೆ ನೀಡಿದ್ದಾರೆ. ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಆದಷ್ಟು ಬೇಗ ಮುಖ್ಯಮಂತ್ರಿಯಾಗುತ್ತಾರೆ. ಯಾವಾಗ ಆಗುತ್ತಾರೆ ಎಂಬುದು ಗೊತ್ತಿಲ್ಲ. ಇಂದಲ್ಲ ನಾಳೆ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಫೊಟಕ ಹೇಳಿಕೆ ನೀಡಿದ್ದರು.

ಇದೇ ವಿಚಾರವಾಗಿ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿ-  ‘ಯಾರೂ ತಿರುಕನ ಕನಸು ಕಾಣೋದು ಬೇಡ. ನಮ್ಮ ಕೇಂದ್ರದ ನಾಯಕ ಮೋದಿ, ಅಮಿತ್ ಶಾ ಅವರು ತೀರ್ಮಾನದಂತೆ ಸಿಎಂ‌ ಆಗಿ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇದನ್ನ ನಮ್ಮ ವರಿಷ್ಠರೇ ಸ್ಪಷ್ಟವಾಗಿ ಹೇಳಿದ್ದಾರೆ. ಜನ ಸಂಕಷ್ಟ ಸಂದರ್ಭದಲ್ಲಿ ಜನರ ಧ್ವನಿಯಾಗಿ ಸ್ಪಂದನೆ ಮಾಡಬೇಕು. ಬೊಮ್ಮಾಯಿಗೆ ಕಾಮನ್ ಸಿಎಂ ಅಂತ ಹೆಸರಿದೆ. ಈಗ ಬಂದಿರೋ ಎಲ್ಲಾ ಸಂಕಷ್ಟಗಳನ್ನ ಒಳ್ಳೆಯ ರೀತಿ ಕೆಲಸ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗುವುದು. ಈಶ್ವರಪ್ಪ ತಮಾಷೆಯಾಗಿ ಹೇಳಿದ್ದಾರೆ‘ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

  • ಪೊಲಿಟಿಕಲ್ ಬ್ಯೂರೋ ಟ್ರೂ ನ್ಯೂಸ್‌ ಕನ್ನಡ

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.