ಕಲಬುರಗಿ ಮಹಾನಗರ ಪಾಲಿಕೆ : ಬಿಜೆಪಿ-ಜೆಡಿಎಸ್ ಸೇರಿ ಮೈತ್ರಿ ಖಚಿತ..!?

ಬೆಂಗಳೂರು: ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತವಿಲ್ಲದೆ ಅತಂತ್ರವಾಗಿರುವ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡು ಬಹುಮತ ಸಾಬೀತುಪಡಿಸಲಿದ್ದೇವೆ. ಒಟ್ಟಾಗಿ ಹೋಗುವ ಬಗ್ಗೆ ಜೆಡಿಎಸ್ ಒಲವು ತೋರಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ಭೇಟಿ ಮಾಡಿತ್ತು. ಈ ವೇಳೆ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಚರ್ಚೆ ನಡೆಸಿದ್ದೇವೆ. ಅದಕ್ಕೆ ಸ್ಥಳೀಯರ ಜೊತೆ ಚರ್ಚೆ ಮಾಡಿ ತೀರ್ಮಾನಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಕಲಬುರಗಿ ಪಾಲಿಕೆಯಲ್ಲಿ ಒಂದಾಗಿ ಕೆಲಸ ಮಾಡಲು ಅವರು ಕೂಡ ಒಲವು ತೋರಿದ್ದಾರೆ. ಬಹುತೇಕವಾಗಿ ಬಿಜೆಪಿ, ಜೆಡಿಎಸ್ ಸೇರಿ ಕಲಬುರಗಿಯಲ್ಲಿ ಬಹುಮತ ಸಾಬೀತುಪಡಿಸಲಿದ್ದೇವೆ ಎಂದು ಮೈತ್ರಿ ಖಚಿತ ಎನ್ನುವ ಸುಳಿವು ನೀಡಿದರು.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.