ಕಲರ್ಸ್ ಕನ್ನಡ ಸೂಪರ್ ಸ್ಟಾರ್ ರಿಯಾಲಿಟಿ ಶೋ ನ ಸ್ಪರ್ಧಿ ಸಮನ್ವಿ ಇನ್ನಿಲ್ಲ..!

ಸಮನ್ವಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿಬರುತ್ತಿದ್ದ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ನ ಸ್ಪರ್ಧಿ 6 ವರ್ಷದ ಸಮನ್ವಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.

truenewskaanada

ಇಂದು ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ ತೆರಳುತ್ತಿದ್ದ ಸಂದರ್ಭ ಲಾರಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

truenewskaanada

ಅಮೃತಾ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

truenewskaanada

 

ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಸಮನ್ವಿ.  ‘ವಾಜರಹಳ್ಳಿ ನಿವಾಸಿ ಅಮೃತಾ ಹಾಗೂ ಮಗಳು ಸಮನ್ವಿ, ಸಮೀಪದಲ್ಲೇ ಇದ್ದ ಮೆಟ್ರೊ ನಿಲ್ದಾಣಕ್ಕೆ ಸ್ಕೂಟಿಯಲ್ಲಿ ಹೊರಟಿದ್ದರು. ಅದೇ ಸಂದರ್ಭದಲ್ಲಿ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಲಾರಿ, ಸ್ಕೂಟಿಗೆ ಗುದ್ದಿತ್ತು’ ಎಂದು ಪೊಲೀಸರು ತಿಳಿಸಿದರು.

  • ನ್ಯೂಸ್ ಬ್ಯೂರೋ, ಟ್ರೂನ್ಯೂಸ್ ಕನ್ನಡ.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.