ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ..!

 ಬೆಂಗಳೂರು : ಕರ್ನಾಟಕಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಇಂದಿನಿಂದ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ  ತೀವ್ರಗೊಂಡಿರುವುದರಿಂದ ಕರ್ನಾಟಕದಲ್ಲಿ ಇನ್ನೂ 2 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

 

ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ತುಂತುರು ಮಳೆ ಶುರುವಾಗಿದೆ. ನಿನ್ನೆ ಸಂಜೆಯಿಂದ ಸುರಿಯಲಾರಂಭಿಸಿದ ಮಳೆ ಇನ್ನೂ ನಿಂತಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರದಿಂದ ಈಗಾಗಲೇ 5 ಜನರು ಸಾವನ್ನಪ್ಪಿದ್ದಾರೆ. ಜೂನ್ 6ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 3ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಅದರ ಪರಿಣಾಮವಾಗಿ ಕರ್ನಾಟಕದ ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

 

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.