ಉಡುಪಿ: ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಮಲ್ಪೆ ಬೀಚ್ನಲ್ಲಿ ಸ್ಥಾಪಿಸಲಾಗಿರುವ ಕರ್ನಾಟಕ ರಾಜ್ಯದ ಪ್ರಪ್ರಥಮ ತೇಲುವ ಸೇತುವೆಗೆ ಚಾಲನೆ ನೀಡಲಾಯಿತು.

100 ಮೀಟರ್ ಉದ್ದ ಹಾಗೂ ಮೂರೂವರೆ ಮೀಟರ್ ಅಗಲ ಇರುವ ಈ ಸೇತುವೆ ಉದ್ದಕ್ಕೂ ತಡೆಬೇಲಿಯನ್ನು ಹಾಕಲಾಗಿದೆ. 10 ವರ್ಷದಿಂದ 60ವರ್ಷ ಪ್ರಾಯದವರು ಇದರಲ್ಲಿ ನಡೆಯುವ ಮೂಲಕ ಹೊಸ ಅನುಭವ ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ನಡೆಯುವವರಿಗೆ ಲೈಫ್ ಜಾಕೆಟ್ ಕಡ್ಡಾಯ ಮಾಡಲಾಗಿದೆ. ಸುಮಾರು 80 ಲಕ್ಷ ರೂ. ವೆಚ್ಚದ ವಿದೇಶಿ ತಂತ್ರಜ್ಞಾನದಲ್ಲಿ ತಯಾರಿಸಿದ ಸೇತುವೆ ಇದಾಗಿದೆ. ಪ್ರವಾಸಿಗರ ಸುರಕ್ಷತೆಗಾಗಿ 10 ಜನ ಲೈಫ್ ಗಾರ್ಡ್, 30 ಮಂದಿ ಲೈಫ್ ಬಾಯ್ಸ್ ಮತ್ತು ಪ್ಯಾಟ್ರೋಲಿಂಗ್ ಮಾಡಲು ಒಂದು ಬೋಟು ನಿಯೋಜಿಸಲಾಗಿದೆ.
- ನ್ಯೂಸ್ ಬ್ಯೂರೋ true news ಕನ್ನಡ