ಕೊಡಗಿನಲ್ಲಿ ಮಳೆಹಾನಿ ಎದುರಿಸಲು ಸ್ಥಳೀಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್: ಚಾರುಲತ ಸೋಮಲ್.

 

ಮಡಿಕೇರಿ:ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಆ ದಿಸೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದ್ದಾರೆ. 
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಹಾನಿ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ತಾಲ್ಲೂಕುವಾರು ಪ್ರತ್ಯೇಕವಾಗಿ ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಬುಧವಾರ  ಸೋಮವಾರಪೇಟೆ ತಾಲ್ಲೂಕು ಸಂಬಂಧಪಟ್ಟಂತೆ ಸಭೆ ನಡೆಸಿ ಮಾಹಿತಿ ಪಡೆದರು.

ಕೊಡಗಿನಲ್ಲಿ ಮಳೆಹಾನಿ ಎದುರಿಸಲು ಸ್ಥಳೀಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್: ಚಾರುಲತ ಸೋಮಲ್.
ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೇಚ್ಚರಿಕೆ ವಹಿಸಬೇಕು. ಮಳೆ ಹಾನಿ ತಡೆಯುವ ನಿಟ್ಟಿನಲ್ಲಿ ಮುಂಚಿತವಾಗಿ ಲಿಖಿತವಾಗಿ ಕುಟುಂಬಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. 
ಕಂದಾಯ ಪೊಲೀಸ್, ಪಂಚಾಯತ್ ರಾಜ್, ಅರಣ್ಯ, ಸೆಸ್ಕ್, ಲೋಕೋಪಯೋಗಿ ಹೀಗೆ ಹಲವು ಇಲಾಖೆಗಳು ಸಮನ್ವಯತೆ¬ಂದ ಕಾರ್ಯ ನಿರ್ವಹಿಸಬೇಕು. ಮಳೆ ಹಾನಿ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸೂಚಿಸಿದರು.
ಸೂಕ್ಷ್ಮ ಪ್ರದೇಶಗಳಲ್ಲಿನ ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು. ಸ್ಥಳೀಯ ಮಟ್ಟದಲ್ಲಿ ಟಾಸ್ಕ್‍ಪೊರ್ಸ್ ಸಮಿತಿ ಸಭೆ ನಡೆಸುವುದು. ಸೂಕ್ಷ್ಮ ಪ್ರದೇಶಗಳಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ ನೀಡುವುದು ಪರಿಹಾರ ಕೇಂದ್ರ ಅಗತ್ಯವಿದ್ದಲ್ಲಿ ತೆರೆಯುವುದು, ಹೀಗೆ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ರಸ್ತೆ, ಸೇತುವೆ, ಮನೆ ಹಾನಿ ಬಗ್ಗೆ ಛಾಯಚಿತ್ರ ಸಹಿತ ತಕ್ಷಣವೇ ಮಾಹಿತಿ ನೀಡುವುದು. ಹಾಗೆಯೇ ಬರೆ ಕುಸಿತ ಉಂಟಾದಲ್ಲಿ ಹಾಗೂ ರಸ್ತೆ ಅಥವಾ ವಿದ್ಯತ್ ಕಂಬಕ್ಕೆ ಮರ ಬಿದ್ದಲ್ಲಿ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದರು. 

ಕೊಡಗಿನಲ್ಲಿ ಮಳೆಹಾನಿ ಎದುರಿಸಲು ಸ್ಥಳೀಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್: ಚಾರುಲತ ಸೋಮಲ್.
ತಹಶೀಲ್ದಾರ ಗೋವಿಂದರಾಜು ಅವರು ಮಾಹಿತಿ ನೀಡಿ ಮುಂಗಾರು ಸಂಬಂಧ ಸೋಮವಾರಪೇಟೆ ತಾಲ್ಲೂಕಿನಲ್ಲಿ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸೂಕ್ಷ್ಮ ಪ್ರದೇಶಗಳ 775 ಕುಟುಂಬಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದರು.
ಕುಶಾಲನಗರ ನೆಲ್ಯಹುದಿಕೇರಿ, ಮಾದಾಪುರ, ಗರ್ವಾಲೆ, ಸೂರ್ಲಬಿ ಮತ್ತಿತ್ತರ ಕಡೆಯಲ್ಲಿ ಪ್ರವಾಹ ಉಂಟಾಗಲಿದ್ದು, ಈ ಪ್ರದೇಶದಲ್ಲಿನ ಜನರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಪರಿಹಾರ ಕೇಂದ್ರ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಭಾರೀ ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇರುವುದರಿಂದ ಸೀಮೆಎಣ್ಣೆ ಪೂರೈಸಬೇಕಿದೆ ಎಂದು ತಹಶೀಲ್ದಾರ್ ಗೋವಿಂದ ರಾಜು ಅವರು ಹೇಳಿದರು.

ಕೊಡಗಿನಲ್ಲಿ ಮಳೆಹಾನಿ ಎದುರಿಸಲು ಸ್ಥಳೀಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್: ಚಾರುಲತ ಸೋಮಲ್.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸವವರಿಗೆ ತರಬೇತಿ ನೀಡುವುದು ಮತ್ತಿತ್ತರ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಸಲಹೆ ಮಾಡಿದರು. 

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ, ನಾಚ್ಚಪ್ಪ, ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳಾದ ಕೆ.ಟಿ.ದರ್ಶನ, ಬಾಲಕೃಷ್ಣ ರೈ, ಶ್ರೀಧರ್, ಸಲೀಂ, ಲಿಂಗರಾಜು, ನೆಹರು ಇತರರು ತಮ್ಮ ಹೋಬಳಿ ವ್ಯಾಪ್ತಿಯಲ್ಲಿ ಮುಂಗಾರು ಸಂಬಂಧ ಕೈಗೊಳ್ಳಲಾದ ಮುನ್ನೇಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕೊಡಗಿನಲ್ಲಿ ಮಳೆಹಾನಿ ಎದುರಿಸಲು ಸ್ಥಳೀಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್: ಚಾರುಲತ ಸೋಮಲ್. 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಡಿವೈಎಸ್ಪಿ ಶೈಲೇಂದ್ರ ಕುಮಾರ್, ಎನ್‍ಡಿಆರ್‍ಎಫ್ ತಂಡದ ಪ್ರಮುಖರಾದ ಬಬ್ಲು ವಿಶ್ವಾಸ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್ ಅವರು ಪ್ರಾಕೃತಿಕ ವಿಕೋಪ ಎದುರಿಸುವ ಬಗ್ಗೆ ಹಲವು ಮಾಹಿತಿ ನೀಡಿದರು...

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.