ಕೊರೊನಾಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಾಯಕ ಬಲಿ..!

ಮಹಾಮಾರಿ ಕೊರೊನಾದಿಂದಾಗಿ ಪಂಜಾಬ್ ನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ  ಸಿಖ್ ಗಾಯಕ ನಿರ್ಮಲ್ ಸಿಂಗ್ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ. ಹೌದು… ಮಾರ್ಚ್ 30 ರಂದು 62 ವರ್ಷದ ನಿರ್ಮಲ್ ಸಿಂಗ್ ಅವರಿಗೆ ಉಸಿರಾಟದ ತೊಂದರೆ ಶುರುವಾಗಿತ್ತು. ಕೂಡಲೇ ಅವರನ್ನು ಗುರು ನಾನಕ್ ದೇವ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನೆನ್ನೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.

ಕೆಲವು ದಿನಗಳ ಹಿಂದೆ ಇವರು ವಿದೇಶದಿಂದ ವಾಪಾಸ್ಸಾಗಿದ್ದರು ಎನ್ನಲಾಗುತ್ತಿದೆ. ಈ ವೇಳೆ ಅವರಿಗೆ ಸೋಂಕು ತಗುಲಿರಬಹುದು ಎಂದು ಅನುಮಾನಿಸಲಾಗಿದೆ. ಆಧರೆ ಅದು ದೃಢಪಟ್ಟಿಲ್ಲ. ಈ ಬಗ್ಗೆ ತನಿಖೆ ಮುಂದುವರೆದಿದೆ.ಈ ಹಿನ್ನೆಲೆಯಲ್ಲಿ ನಿರ್ಮಲ್ ಸಿಂಗ್ ಅವರ ಹೆಂಡತಿ, ಮಗಳು, ಮಗ  ಹಾಗೂ ಚಾಲಕನ ಜೊತೆಗೆ 6 ಮಂದಿಯನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಇದಾದ ಬಳಿಕ ನಿರ್ಮಲ್ ಸಿಂಗ್ ವಾಸಿಸುತ್ತಿದ್ದ ಪ್ರದೇಶವನ್ನು ಪೊಲೀಸರು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ.

 

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.