ಮೀರಾಬಾಯಿ ಚಾನು ಬೆಳ್ಳಿ ಪದಕ ಸಾಧನೆಗೆ ಪ್ರಧಾನಿ ಮೋದಿ ಸಂತಸ

ಟೋಕಿಯೊ: ಭಾರತದ ಮೀರಾಬಾಯಿ ಚಾನು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ. ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ.

49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ.

 

ಪ್ರಧಾನಿ ಮೋದಿ ಶುಭಾಶಯ ಮೀರಾಬಾಯಿ ಚಾನು ಸಾಧನೆಗೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮೀರಾಬಾಯಿ ಚಾನು ಅವರ ಸಾಧನೆಯಿಂದ ದೇಶಕ್ಕೆ ಹೆಮ್ಮೆಯಾಗಿದೆ. ಟೋಕಿಯೋ ಒಲಿಂಪಿಕ್​​ನ ಆರಂಭದಲ್ಲೇ ಈ ಸಂತೋಷದ ಸುದ್ದಿಯಿಂದ ಖುಷಿಯಾಗಿದೆ. ಆಕೆಯ ಯಶಸ್ಸು ಪ್ರತಿಯೊಬ್ಬ ಭಾರತೀಯರಿಗೂ ಪ್ರೇರಣೆ ಎಂದಿದ್ದಾರೆ.

 

 

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.