ಪೈಲೆಟ್ ಆಗಬೇಕೆಂದು ಕನಸು ಕಂಡಿದ್ದ 23ರ ಹರೆಯದ ಕೊಡಗಿನ ಯುವಕ ಗುಜರಾತಿನಲ್ಲಿ ಆತ್ಮಹತ್ಯೆ.

ಸುಂಟಿಕೊಪ್ಪ: ಭವಿಷ್ಯದಲ್ಲಿ ಪೈಲೆಟ್ ಆಗಬೇಕೆಂಬ ಕನಸು ಹೊತ್ತಿದ್ದ ಸುಂಟಿಕೊಪ್ಪ ಸಮೀಪದ ಮಾದಾಪುರದ ಜಂಬೂರುಬಾಣೆಯ ಯುವಕ ಗುಜರಾತಿನ ಅಹಮದಾಬಾದ್ ನಲ್ಲಿ ಶುಕ್ರವಾರ  ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಸುಂಟಿಕೊಪ್ಪ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಬೋಪಯ್ಯ ಮತ್ತು ಮಾದಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಪೊನ್ನಮ್ಮ ಅವರ ಪುತ್ರ ಶಿಬಿ ಬೋಪಯ್ಯ(23) ಆತ್ಮಹತ್ಯೆಗೆ ಶರಣಾದ ಯುವಕ.

ಗುಜರಾತಿನ ಅಹಮದಾಬಾದ್ ನಲ್ಲಿ ಏರೋನಾಟಿಕ್ ಸೆಂಟರ್ ನಲ್ಲಿ ತರಬೇತಿ ಕೇಂದ್ರದಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದ ಶಿಬಿ ಬೋಪಯ್ಯ ಇನ್ನೇನು 3 ತಿಂಗಳಲ್ಲಿ ತರಬೇತಿ ಮುಗಿಸಿ ಭವಿಷ್ಯದ ಪೈಲಟ್ ಆಗುವ ಕನಸು ಹೊತ್ತಿದ್ದನು.ಆದರೆ  ಶುಕ್ರವಾರ ಸೆಂಟರ್ ಸಮೀಪದ ಕಾಡಿನಲ್ಲಿ ಮರವೊಂದಕ್ಕೆ‌ ನೇಣು ಹಾಕಿಕೊಂಡು ಆತ್ಮಹತ್ಯೆ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. 
ಈಗಾಗಲೇ ಮನೆಯವರು ಗುಜರಾತಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ತಲುಪಿದ ನಂತರವೇ ನಿಜಾಂಶ ಹೊರ ಬೀಳಲಿದೆ.
ನೇಣು ಸ್ಥಿತಿಯಲ್ಲಿರುವ ಯುವಕನ ಕಿವಿಯಲ್ಲಿ ಇಯರ್ ಪೋನ್, ವಾಚ್, ಶೂ ಧರಿಸಿರುವುದು ಕಂಡು ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.  ಪಾಲಕರು ಗುಜರಾತಿ ತಲುಪಿದ ನಂತರವೇ ಸತ್ಯಾಂಶ ಹೊರ ಬರಬೇಕಾಗಿದೆ.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.