ಪಶ್ಚಿಮ ಬಂಗಾಳದಲ್ಲಿ ಸೆ.30 ರಂದು ಉಪಚುನಾವಣೆ :ಮಮತಾ ಗೆಲ್ಲಲೇಬೇಕಾದ ಅನಿವಾರ್ಯತೆ ..!

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸೆ.30 ರಂದು ಉಪಚುನಾವಣೆ ಘೋಷಿಸಿದೆ. ಅಕ್ಟೋಬರ್ 3 ರಂದು ಮತಗಳನ್ನು ಎಣಿಕೆ ನಡೆಯಲಿದೆ. ಲಿ ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಇತರ 31 ಕ್ಷೇತ್ರಗಳ ಉಪ ಚುನಾವಣೆಗಳನ್ನು ಮುಂದೂಡಲಾಗಿದೆ. ಪಶ್ಚಿಮ ಬಂಗಾಳ ರಾಜ್ಯದ ಸಾಂವಿಧಾನಿಕ ತುರ್ತುಸ್ಥಿತಿ ಮತ್ತು ವಿಶೇಷ ವಿನಂತಿಯನ್ನು ಪರಿಗಣಿಸಿ ಭಬನಿಪುರಕ್ಕೆ ಉಪಚುನಾವಣೆ ನಡೆಸಲು ನಿರ್ಧರಿಸಲಾಗಿದೆ.
ಇನ್ನು ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿತು, ಬಂಗಾಳ ವಿಧಾನಸಭೆಯಲ್ಲಿ ಒಟ್ಟು 294 ಸ್ಥಾನಗಳಲ್ಲಿ 213 ಸ್ಥಾನಗಳನ್ನು ಗೆದ್ದಿತು. ಆದರೆ ಮಮತಾ ಬ್ಯಾನರ್ಜಿ ವೈಯಕ್ತಿಕ ಸ್ಪರ್ಧೆಯಲ್ಲಿ ಸೋಲುಂಡಿದ್ದರು. ಹೀಗಾಗಿ ಈ ಉಪಚುನಾವಣೆಯಲ್ಲಿ ಮಮತಾ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

  • ನ್ಯೂಸ್ ಬ್ಯೂರೋ ಟ್ರೂ ನ್ಯೂಸ್ ಕನ್ನಡ

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.