ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ.

ಬೆಂಗಳೂರು- ಲಿಂಗಾಯತ ಸಮುದಾಯದ ಹಾಗೂ ನಿರ್ಗಮಿತ ಸಿಎಂ ಬಿಎಸ್​ ಯಡಿಯೂರಪ್ಪ ಅವರ ಆಪ್ತ ಬಸವರಾಜ್​ ಬೊಮ್ಮಾಯಿ. ರಾಜಭವನದ ಗಾಜಿನ ಅರಮನೆಯಲ್ಲಿ ನಡೆಯುವಂತ ಸರಳ ಸಮಾರಂಭ. ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಪ್ರತಿಜ್ಞಾವಿಧಿಯನ್ನು ಬೋಧಿಸಿದ್ರು, ಪ್ರಮಾಣಕ್ಕೆ ಸಾಕ್ಷಿಯಾಗಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನವರು ಹಾಗೂ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​​​​, ಧರ್ಮೇಂದ್ರ, ಪ್ರದಾನ್​​​,ಕಿಶನ್​​ ರೆಡ್ಡಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

 

ನೂತನ ಸಿಎಂ ಘೋಷಣೆ ಬೆನ್ನಲ್ಲೇ ಸರ್ಕಾರದಲ್ಲಿ ಮೂವರು ಡಿಸಿಎಂಗಳ ಕಾರ್ಯ ನಿರ್ವಹಣೆ ಸಾಧ್ಯತೆ ಇದೆ ಎನ್ನಲಾಗ್ತಿದೆ. ಆರ್. ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲುಗೆ ಡಿಸಿಎಂ ಪಟ್ಟ ಸಿಗಲಿದೆ ಅನ್ನೊ ಮಾತುಗಳು ಕೇಳಿ ಬರ್ತಿದೆ.  ಆದ್ರೆ ಇನ್ನೂ ಅಧಿಕೃತವಾಗಿ ಆದೇಶ ಬಂದಿಲ್ಲ.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.