ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತಿದ್ದೇನೆ.ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ : ಬಿಎಸ್ ಯಡಿಯೂರಪ್ಪ.

ಬೆಂಗಳೂರು: ನಾನು ರಾಜ್ಯದ ಹಿತಕ್ಕಾಗಿ ಕೆಲಸ ಆದರೆ ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಒಂದು ವೇಳೆ ಹೈಕಮಾಂಡ್ ನನಗೆ ರಾಜೀನಾಮೆ ನೀಡಲು ಹೇಳಿದ್ದಾರೆ ಆಕ್ಷಣವೇ ನಾನು ರಾಜೀನಾಮೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯುಡಿಯೂರಪ್ಪ ನುಡಿದಿದ್ದಾರೆ. ನನ್ನ ಮುಂದೆ ರಾಜ್ಯವನ್ನು ಕೋವಿಡ್ ವಿಪತ್ತಿನಿಂದ ಪಾರು ಮಾಡುವುದಾಗಿದೆ. ಉಳಿದ ರಾಜಕೀಯದ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ. ನಾನು ರಾಜ್ಯದ ಜನತೆ ಗೋಸ್ಕರ ರಾತ್ರಿ-ಹಗಲೆನ್ನದೆ ಕೆಲಸ ಮಾಡಿದ್ದೇನೆ. ಎಲ್ಲಿಯೂ ಲೋಪವಾಗದಂತೆ ಎಚ್ಚರ ವಹಿಸಿದ್ದೇನೆ. ಆದರೆ ಕೋವಿಡ್ ವಿಪತ್ತು ನಮ್ಮ ಮುಂದೆ ಬಹುದೊಡ್ಡ ಸವಾಲನ್ನು ಒಡ್ಡಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಈ ನಡುವೆ ಶಾಸಕ ಬಸವರಾಜ ಯತ್ನಾಳ್ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಪದೇ ಪದೇ ಹೇಳಿಕೆ ನೀಡುತ್ತ ಬಂದಿದ್ದಾರೆ. ಒಂದು ವಾರಗಳ ಹಿಂದೆ ಜೂನ್ 15ರಂದು ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಹೇಳಿಕೆಯನ್ನು ಕೂಡ ನೀಡಿದ್ದಾರೆ. ಈವರೆಗೆ ಮೌನವಾಗಿದ್ದ ಬಿಎಸ್ ಯಡಿಯೂರಪ್ಪನವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಈಗ ಸಂಚಲನವನ್ನು ಮೂಡಿಸಿದೆ. ಈವರೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ತನ್ನ ರಾಜೀನಾಮೆ ಅಥವಾ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಲಿಲ್ಲ. ಈಗ ನೀಡಿದ ಹೇಳಿಕೆ ಹೊಸ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ. ಆದರೆ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ. 1 ವಾರದ ಹಿಂದೆ ಹಲವಾರು ಮಂದಿ ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ ಎಂಬ ವರದಿಗಳು ಮಾಧ್ಯಮದಲ್ಲಿ ಕಂಡುಬಂದಿದ್ದವು. ಒಟ್ಟಾರೆ ಕರ್ನಾಟಕದ ರಾಜಕೀಯ ಎಲ್ಲರ ಕುತೂಹಲ ಕೆರಳಿಸಿದೆ.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.