ಸದ್ಯದಲ್ಲೇ ಮಂಗಳೂರು ವಿ.ವಿ. 6 ನೇ ಸೆಮಿಸ್ಟರ್ ಪರೀಕ್ಷೆ..!

ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ 6ನೇ ಸೆಮಿಸ್ಟರ್ ಪರೀಕ್ಷೆ ಇನ್ನೂ ನಡೆದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಕೋರ್ಸುಗಳಿಗೆ ಶರಣ ವೆಂದರೆ ಅಲ್ಲಿ ಆರನೇ ಸೆಮಿಸ್ಟರ್ ಅಂಕಪಟ್ಟಿ ಕೇಳುತ್ತಿರುವುದು ವಿದ್ಯಾರ್ಥಿಗಳಿಗೆ ದಾರಿ ತೋಚದಂತಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಆರನೇ ಸೆಮಿಸ್ಟರ್ ನಲ್ಲಿ ಹಾಕಿರುವ ತರಗತಿಗಳನ್ನು ಶೀಘ್ರ    ಪೂರ್ಣಗೊಳಿಸಿ ಪರೀಕ್ಷೆ ನಡೆಸಲು ವಿ.ವಿ ತೀರ್ಮಾನಿಸಿದೆ. ಸೆಪ್ಟೆಂಬರ್ ಕೊನೆಯಲ್ಲಿ ಪರೀಕ್ಷೆ ಆರಂಭವಾದರೆ 10 ದಿನದೊಳಗೆ ಪೂರ್ಣಗೊಳಿಸಿ 15 ದಿನದೊಳಗೆ ಮೌಲ್ಯಮಾಪನ ಮುಗಿಸಿ ಅಕ್ಟೋಬರ್ ಮಧ್ಯದಲ್ಲಿ ಫಲಿತಾಂಶ ಪ್ರಕಟಿಸಬಹುದು ಎಂದು ವಿ.ವಿಯ ಚಿಂತನೆ 
ಪದವಿಯಲ್ಲಿ ‌1,3,5 ನೇ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ದಲ್ಲಿ 1 ಮತ್ತು ಮೂರನೇ ಸೆಮಿಸ್ಟರ್ ಇತ್ತೀಚಿಗೆ ಪೂರ್ಣಗೊಂಡಿದ್ದು ಮೌಲ್ಯಮಾಪನ ಕೂಡ ಆರಂಭವಾಗಿತ್ತು ಅದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರಾಂಶುಪಾಲರ ಸಭೆಯಲ್ಲಿ  ಸದ್ಯಕ್ಕೆ ತರಗತಿ ಮಾಡಿ ಆರನೇ ಸೆಮಿಸ್ಟರ್ ಮಕ್ಕಳ ಪರೀಕ್ಷೆ ಮುಗಿಸಿದ ಬಳಿಕ ಉಳಿದ ಮೌಲ್ಯಮಾಪನ ನಡೆಸುವುದು ಸೂಕ್ತ ಎಂದು ತೀರ್ಮಾನ ಕೈಗೊಂಡಿದ್ದಾರೆ ಹೀಗೆ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿದೆ ಎಂದು ಅಭಿಪ್ರಾಯ. ಆರನೇ ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು.ಪ್ರೊ| ಟಿ.ಎಸ್.ಯಡಪಡಿತ್ತಾಯ, ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ತಿಳಿಸಿದ್ದಾರೆ.

 

ನ್ಯೂಸ್ ಬ್ಯೂರೋ ಟ್ರೂ ನ್ಯೂಸ್ ಕನ್ನಡ

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.