ರಾಮನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಕ್ರಾತಿ ನಂತರ ಇರುವುದೇ ಅನುಮಾನ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸಂಶಯ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಈ ವರ್ಷದ ನಂತರ ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗಲಿದೆ. ಕಾಂಗ್ರೆಸ್ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ. ಅವರಿಗೆ ಶಾಸಕರ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ಸರ್ಕಾರ ಐದು ಗ್ಯಾರಂಟಿ ಕೊಟ್ಟಿದೆ ಹಾಗಾಗಿ ಅನುದಾನ ಕೊಡಲ್ಲ ಅಂತ ಹೇಳಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಲ್ಲಿ ದುಡ್ಡಿಲ್ಲ. ಹಾಗಾಗಿ ಕಾಂಗ್ರೆಸ್ ಶಾಸಕರು ನಿರುದ್ಯೋಗಿಗಳಾಗಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.