ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು  ಸರ್ಕಾರದಿಂದ ಅಗತ್ಯ ಕ್ರಮ: ಬಿಎಸ್ ಯಡಿಯೂರಪ್ಪ

ಬಾಗಲಕೋಟೆ: ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈತರಿಗೆ ಭರವಸೆ ನೀಡಿದ್ದಾರೆ. 

bsy

ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದ ತೋಟಗಾರಿಕಾ ಮೇಳವನ್ನು ಆನ್‌ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಿಎಫ್‌ಟಿಆರ್‌ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್‌ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದಿದ್ದಾರೆ.

bsy

ಸಂಶೋಧನೆಗೆ ಸರ್ಕಾರದ ಸಹಾಯ ತೋಟಗಾರಿಕಾ ಬೆಳೆ ಬೆಳೆಯುವುದರಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಅದರೊಂದಿಗೆ ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ ಅಗತ್ಯ. ಹೀಗಾಗಿ ತೋಟಗಾರಿಕಾ ಕ್ಷೇತ್ರದಲ್ಲಿ ನಡೆಯುವ ಸಂಶೋಧನೆಗೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಎಲ್ಲ ಸಹಾಯ-ಸಹಕಾರವನ್ನು ರಾಜ್ಯ ಸರ್ಕಾರ ಕೊಡಲಿದೆ ಎಂದು ಸಿಎಂ ಬಿಎಸ್‌ವೈ ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

 

  • ನ್ಯೂಸ್ ಬ್ಯೂರೋ, ಟ್ರೂನ್ಯೂಸ್ ಕನ್ನಡ

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.