ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (acb) ಅಧಿಕಾರಿಗಳು ವಾಣಿಜ್ಯ ಉದ್ದೇಶಕ್ಕೆ ಪರವಾನಿಗೆ ಕೊಡುವ ವಿಚಾರಕ್ಕೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಹಾಗೂ ಇಬ್ಬರು ಪ್ರಾಧಿಕಾರ ಅಧಿಕಾರಿ ಬಂಧಿಸಿದ್ದಾರೆ.
ನಗರದ ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಎಸ್ಪಿ ಸೈಮನ್, ಡಿವೈಎಸ್ಪಿ ಮಂಜುನಾಥ್ ಕವರಿ ನೇತೃತ್ವದಲ್ಲಿ ದಾಳಿಯಾಗಿದೆ. ಎಸಿಬಿ ಎಸ್ಐ ಸತೀಶ್, ರಫೀಕ್ ಎಂ ದಾಳಿ ಸಂದರ್ಭದಲ್ಲಿ ಜೊತೆಗಿದ್ದರು. ಇದೇ ವೇಳೆ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಗುರುಪ್ರಸಾದ್ ಅವರಿಂದ 2.50 ಲಕ್ಷ ರೂ. ವಶಕ್ಕೆ ಪಡೆದಿದೆ.
ಗುರುಪ್ರಸಾದ್, ನಯಿಮಾ ಸಯೀದ್, ಪ್ರಸಾದ್ ಮೇಲೆ ಹಲವಾರು ಬಾರಿ ಸಾರ್ವಜನಿಕರು ಈ ಹಿಂದೆ ದೂರು ನೀಡಿದ್ದರು. ನಗರಾಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳು ಲಂಚ ಕೊಟ್ಟರೂ ಕೆಲಸ ಮಾಡಿಕೊಡುವುದಿಲ್ಲ ಎಂಬ ಸಾರ್ವಜನಿಕರ ಆರೋಪದಡಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ್ದಾರೆ.
- ನ್ಯೂಸ್ ಬ್ಯೂರೋ, ಟ್ರೂನ್ಯೂಸ್ ಕನ್ನಡ.