ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ

ನವದೆಹಲಿ : ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ, ಕ್ರಿಕೆಟ್ ನಿರೂಪಕಿ ಸಂಜನಾ ಗಣೇಶನ್ ಕೈಹಿಡಿಯಲಿದ್ದಾರೆ ಎಂದು ಹರಡಿದ್ದ ಸುದ್ದಿಗಳಿಗೆ ಸೋಮವಾರ ಅಧಿಕೃತ ಮುದ್ರೆ ಒತ್ತಿದ್ದಾರೆ. ಸಂಜನಾ ಜತೆಗೆ ಗೋವಾದಲ್ಲಿ ನಡೆದಿರುವ ವಿವಾಹ ಸಮಾರಂಭದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಬುಮ್ರಾ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ತಲುಪಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರೋ ಅವರು, ಪ್ರೀತಿಯಿಂದ ಪ್ರೇರಿತವಾದ ನಾವು ಒಟ್ಟಿಗೆ ಹೊಸ ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಇಂದು ನಮ್ಮ ಜೀವನದ ಅತ್ಯಂತ ಸಂತೋಷದಾಯಕ ದಿನಗಳಲ್ಲಿ ಒಂದಾಗಿದೆ ಮತ್ತು ನಮ್ಮ ವಿವಾಹದ ಸುದ್ದಿ ಮತ್ತು ನಮ್ಮ ಸಂತೋಷವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಾವು ಬಯಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ ಈ ವಿವಾಹ ಕಾರ‍್ಯಕ್ರಮಕ್ಕೆ ಎರಡು ಕುಟುಂಬಗಳ ಸೀಮಿತ ಸದಸ್ಯರಿಗೆ ಮಾತ್ರ ಆಹ್ವಾನ ನೀಡಿ ಸರಳವಾಗಿ ಮತ್ತು ತುಂಬಾನೇ ಖಾಸಗಿಯಾಗಿ ಈ ವಿವಾಹ ಕರ‍್ಯಕ್ರಮ ನಡೆದಿದೆ. 


ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾದಿಂದ ರಜೆ ಪಡೆದಿದ್ದರು. ನಾಲ್ಕನೇ ಟೆಸ್ಟ್ ಪಂದ್ಯದ ಮೊದಲು ಬುಮ್ರಾ ವೈಯಕ್ತಿಕ ಕಾರಣಗಳಿಗಾಗಿ ರಜೆ ಕೋರಿದ್ದಾರೆ ಎಂದು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿತ್ತು. ಇದರಿಂದಾಗಿ ಅಹಮದಾಬಾದ್‌ನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಬುಮ್ರಾ ಆಡಲು ಸಾಧ್ಯವಾಗಲಿಲ್ಲ. ಕೆಲವು ದಿನಗಳ ನಂತರ, ಬುಮ್ರಾ ಮದುವೆಗೆ ಸಿದ್ಧತೆಯಲ್ಲಿ ನಿರತರಾಗಿದ್ದಾರೆ ಎಂದು ವರದಿಯಾಗಿತ್ತು. ಆದರೆ, ವೇಗದ ಬೌಲರ್ ಯಾರನ್ನು ಮದುವೆಯಾಗುತ್ತಿದ್ದಾರೆ ಎಂಬುದು ಸ್ಪಷ್ಟವಾಗಿರಲಿಲ್ಲ. 


ಹೀಗಾಗಿ ಕೊನೆಗೂ ಬೂಮ್ರಾ ಮದುವೆ ಗೆರೆಯನ್ನ ದಾಟಿದ್ದು, 28 ವರ್ಷದ ಸಂಜನಾ ಗಣೇಶನ್ ಅವರನ್ನ ವರಿಸಿದ್ದಾರೆ. ಇವರು ಮೂಲತಃ ಪುಣೆಯವರು. ಮಾಡೆಲಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಸಂಜನಾ 2014ರಲ್ಲಿ ಫೆಮಿನಾ ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯ ಫೈನಲಿಸ್ಟ್ ಕೂಡ ಆಗಿದ್ದಾರೆ. 2016ರಲ್ಲಿ ಸ್ಟಾರ್‌ಸ್ಪೋರ್ಟ್ಸ್ಗೆ ಕ್ರೀಡಾ ನಿರೂಪಕಿಯಾಗಿ ಸೇರ್ಪಡೆಯಾಗಿದ್ದಾರೆ. 2016ರ ಈಚೆಗೆ ಕ್ರೀಡೆಗೆ ಸಂಬAಧಪಟ್ಟ ಶೋ, ಸಂದರ್ಶನಗಳಲ್ಲಿ ಅವರು ಸಕ್ರಿಯವಾಗಿದ್ದಾರೆ. ಐಪಿಲ್ ವೇಳೆ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನೈಟ್ ಕ್ಲಬ್ ಶೋನ ನಿರೂಪಕಿ ಕೂಡ ಆಗಿದ್ದರು.


ಸ್ಪೋರ್ಟ್ಸ್ ಬ್ಯೂರೋ ಟ್ರೂ ನ್ಯೂಸ್ ಕನ್ನಡ

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.